ಡೆಹ್ರಾಡೂನ್: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಪ್ರಕರಣದ ಬಳಿಕ ಇದೀಗ ಬದರಿನಾಥ ಧಾಮದಲ್ಲೂ ಕಾಣಿಕೆ ಹಣ ದುರುಪಯೋಗವಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ.
ಬದರಿನಾಥ–ಕೇದರನಾಥ ದೇವಸ್ಥಾನ ಸಮಿತಿ ಅಧ್ಯಕ್ಷ ಹೇಮಂತ್ ದ್ವಿವೇದಿ ಅವರು ಈ ಕುರಿತು ಮಾಹಿತಿ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆರೋಪಗಳನ್ನು ಸಮಿತಿ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.
ಪ್ರಕರಣದ ಸತ್ಯಾಸತ್ಯತೆ ಪರಿಶೀಲಿಸಲು ವಿಶೇಷ ತನಿಖಾ ಸಮಿತಿಯನ್ನು ರಚಿಸಲು ಆದೇಶ ನೀಡಲಾಗಿದ್ದು, ಸಂಬಂಧಪಟ್ಟ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಿ ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ.
ದೇಣಿಗೆ ದುರುಪಯೋಗದ ಆರೋಪದ ಹಿನ್ನೆಲೆ ಧಾರ್ಮಿಕ ಸಂಸ್ಥೆಗಳ ನಿರ್ವಹಣೆ ಹಾಗೂ ಹಣಕಾಸು ಪಾರದರ್ಶಕತೆ ಕುರಿತು ಮತ್ತೆ ಚರ್ಚೆ ಆರಂಭವಾಗಿದೆ.



