ಬೆಂಗಳೂರು: ನಟ ಕೋಮಲ್ ಕುಮಾರ್ ಅವರ ಹುಟ್ಟುಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡುವಂತೆ ‘ರೋಲೆಕ್ಸ್’ ಚಿತ್ರದ ತಂಡ ಹೊಸ ಗ್ಲಿಂಪ್ಸ್ ಹಾಗೂ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿದೆ.
ಅಂಬಟಿ ಮಧು ಮೋಹನ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಶ್ರೀನಿವಾಸ್ ಮಂಡ್ಯ ನಿರ್ದೇಶಿಸುತ್ತಿದ್ದು, ಪೋಸ್ಟರ್‌ನಲ್ಲಿ ಕೋಮಲ್ ಹೊಸ ಸ್ಟೈಲಿಷ್ ಲುಕ್‌ನಲ್ಲಿ ಮಿಂಚಿದ್ದಾರೆ. ಈ ಮೂಲಕ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿಸಿರುವ ಚಿತ್ರತಂಡ, ಕೋಮಲ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನೂ ತಿಳಿಸಿದೆ.
ಸಂಪೂರ್ಣ ಕೌಟುಂಬಿಕ ಕಾಮಿಡಿ ಕಥಾಹಂದರ ಹೊಂದಿರುವ ‘ರೋಲೆಕ್ಸ್’ ಚಿತ್ರದಲ್ಲಿ ಕೋಮಲ್ ಅವರ ವೃತ್ತಿಜೀವನದಲ್ಲೇ ವಿಭಿನ್ನ ಪಾತ್ರ ಮತ್ತು ವಿಶೇಷ ಗೆಟಪ್ ಇರಲಿದೆ ಎಂದು ಚಿತ್ರತಂಡ ತಿಳಿಸಿದೆ.
ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದು, ರಾಕೇಶ್ ತಿಲಕ್ ಕ್ಯಾಮೆರಾ ಹಿಡಿದಿದ್ದಾರೆ. ಅರವಿಂದ್ ರಾಜ್ ಸಂಕಲನ ಮಾಡಿದ್ದು, ಮುರಳಿಕೃಷ್ಣ ಕಾರ್ಯಕಾರಿ ನಿರ್ಮಾಪಕರಾಗಿ ಹಾಗೂ ರಾಜೇಶ್ ವರ್ಮ ಕ್ರಿಯೇಟಿವ್ ಹೆಡ್ ಆಗಿ ಚಿತ್ರಕ್ಕೆ ಕೈಜೋಡಿಸಿದ್ದಾರೆ.



