ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗದಗ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ನಡೆಯಿತು.
ಸಭೆಯಲ್ಲಿ ಸ್ಥಳೀಯ ಲೆಕ್ಕಪರಿಶೋಧನ ವರ್ತುಲದ ಲೆಕ್ಕಪರಿಶೋಧನಾಧಿಕಾರಿ ಎಂ.ಜಿ. ದೊಡ್ಡಮನಿ ಅವರನ್ನು ಜಿಲ್ಲಾ ಘಟಕದ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯತ್ ಲೆಕ್ಕಾಧೀಕ್ಷಕ ಮಲ್ಲಿಕಾರ್ಜುನ ಹೊಸೂರು ಅವರನ್ನು ಉಪಾಧ್ಯಕ್ಷರಾಗಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಲೆಕ್ಕಾಧೀಕ್ಷಕ ಅರಿಹಂತ ದುಂಡಣ್ಣನವರ ಅವರನ್ನು ಕಾರ್ಯದರ್ಶಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದ ಅಧಿಕಾರಿಗಳು, ಇಲಾಖೆಯ ಅಭಿವೃದ್ಧಿ, ಸಿಬ್ಬಂದಿಯ ಹಿತಾಸಕ್ತಿ ಹಾಗೂ ಸಮನ್ವಯದೊಂದಿಗೆ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ್, ಸ್ಥಳೀಯ ಲೆಕ್ಕಪರಿಶೋಧನ ವರ್ತುಲದ ಹಿರಿಯ ಉಪ ನಿರ್ದೇಶಕಿ ಶಾಂತಾ ಜಾಧವ, ಲೆಕ್ಕಪರಿಶೋಧನಾಧಿಕಾರಿಗಳಾದ ಗುರುರಾಜ್ ಚವ್ಹಾಣ, ಟಿ.ಎಂ. ಕಂಠಿ, ಪ್ರಕಾಶ್ ಮುದ್ಗಲ್ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಸಭೆಯ ನಂತರ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಇಲಾಖೆಯ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.



