HomeIndia News13 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ: ರಾಜಸ್ಥಾನದಲ್ಲಿ ನಾಲ್ಕು ಹೋಟೆಲ್ʼ ಗಳ ನೆಲಸಮ

13 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ: ರಾಜಸ್ಥಾನದಲ್ಲಿ ನಾಲ್ಕು ಹೋಟೆಲ್ʼ ಗಳ ನೆಲಸಮ

For Dai;y Updates Join Our whatsapp Group

ಜೈಪುರ: 13 ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದಲ್ಲಿ ನಾಲ್ಕು ಹೋಟೆಲ್‌ಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸರು ನೆಲಸಮಗೊಳಿಸಿದ್ದಾರೆ.

ಪ್ರಕರಣದಲ್ಲಿ ಹೋಟೆಲ್ ಮಾಲೀಕರು ಹಾಗೂ ನಿರ್ವಾಹಕರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಅಪರಾಧಕ್ಕೆ ಸಂಬಂಧಿಸಿದ ಕಟ್ಟಡಗಳನ್ನು ಬುಲ್ಡೋಜರ್ ಮೂಲಕ ತೆರವುಗೊಳಿಸಲಾಗಿದೆ. ಆರೋಪಿಗಳು ಕಠಿಣ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿಶಂಕರ್ ಎಚ್ಚರಿಕೆ ನೀಡಿದ್ದಾರೆ.

ಜೂನ್ 18ರಂದು ಬಾಲಕಿ ಮನೆಯಿಂದ ನಾಪತ್ತೆಯಾಗಿದ್ದಳು. ತನಿಖೆ ಪ್ರಕಾರ, ರಿಕ್ಷಾ ಚಾಲಕನೊಬ್ಬ ಬಾಲಕಿಯನ್ನು ಹೋಟೆಲ್ ಮಾಲೀಕರಿಗೆ ಕರೆದೊಯ್ದಿದ್ದು, ನಂತರ ಐದು ದಿನಗಳ ಕಾಲ ನಗರದ ವಿವಿಧ ಹೋಟೆಲ್‌ಗಳಲ್ಲಿ 30ಕ್ಕೂ ಹೆಚ್ಚು ಪುರುಷರು ಆಕೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಎಫ್‌ಐಆರ್ ಪ್ರಕಾರ, ಹಲವಾರು ಹೋಟೆಲ್ ಮಾಲೀಕರು ಮತ್ತು ನಿರ್ವಾಹಕರು ಕೂಡ ಈ ಕೃತ್ಯದಲ್ಲಿ ಭಾಗಿಯಾಗಿದ್ದು, ಬಾಲಕಿಗೆ ಮದ್ಯ ಕುಡಿಸಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರಕರಣ ಸಂಬಂಧ ಇದುವರೆಗೆ 12 ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಶಂಕಿತರ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ಅಮಾನವೀಯ ಘಟನೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಅಕ್ರಮ ಹೋಟೆಲ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ ತಪ್ಪಿತಸ್ಥರಿಗೆ ಗರಿಷ್ಠ ಶಿಕ್ಷೆ ವಿಧಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇದೇ ವಿಚಾರವಾಗಿ ಕಾಂಗ್ರೆಸ್ ಪಕ್ಷವೂ ಪ್ರತಿಭಟನೆ ನಡೆಸಿ, ಪ್ರಕರಣದಲ್ಲಿರುವ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img