HomeCrime Newsಚಿಕ್ಕಬಳ್ಳಾಪುರದಲ್ಲಿ ಭೀಕರ ಘಟನೆ: ವೈರ್‌ನಿಂದ ಕುತ್ತಿಗೆ ಬಿಗಿದು ಪತ್ನಿ ಕೊಲೆ, ಗಂಡ ಎಸ್ಕೇಪ್!

ಚಿಕ್ಕಬಳ್ಳಾಪುರದಲ್ಲಿ ಭೀಕರ ಘಟನೆ: ವೈರ್‌ನಿಂದ ಕುತ್ತಿಗೆ ಬಿಗಿದು ಪತ್ನಿ ಕೊಲೆ, ಗಂಡ ಎಸ್ಕೇಪ್!

For Dai;y Updates Join Our whatsapp Group

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನೆಲೆ ಪತಿಯೇ ಪತ್ನಿಯನ್ನು ವೈರ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

35 ವರ್ಷದ ಪವಿತ್ರಾ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಆರೋಪಿ ಪತಿ ವೆಂಕಟೇಶ್ ಕೊಲೆ ಮಾಡಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ದಂಪತಿಗೆ ಮದುವೆಯಾಗಿ 15 ವರ್ಷಗಳಾಗಿದ್ದು, ಮೂವರು ಮಕ್ಕಳಿದ್ದಾರೆ. ಆರೋಪಿ ವೆಂಕಟೇಶ್‌ಗೆ ಕುಡಿತದ ಚಟವಿದ್ದು, ಸಾಲದ ಭಾರ ಹೆಚ್ಚಾಗಿತ್ತು. ಇದೇ ಕಾರಣಕ್ಕೆ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ಹೇಳಲಾಗಿದೆ.

ಮನೆ ಒತ್ತೆ ಇಡುವ ವಿಚಾರ ಸೇರಿದಂತೆ ಆರ್ಥಿಕ ಸಮಸ್ಯೆಗಳ ಹಿನ್ನೆಲೆ ಇಂದು ನಡೆದ ಗಲಾಟೆ ತೀವ್ರಗೊಂಡು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಘಟನೆ ಕುರಿತು ಮಾಹಿತಿ ದೊರೆತ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿ ವೆಂಕಟೇಶ್‌ಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img