HomeBengaluru Newsಗುಂಡಿ ರಸ್ತೆಗಳೇ ಟ್ರಾಫಿಕ್‌ಗೆ ಕಾರಣ? 750 ಜಂಕ್ಷನ್‌ಗಳ ಬಗ್ಗೆ ಜಿಬಿಎಗೆ ವರದಿ ಸಲ್ಲಿಸಿದ ಪೊಲೀಸರು!

ಗುಂಡಿ ರಸ್ತೆಗಳೇ ಟ್ರಾಫಿಕ್‌ಗೆ ಕಾರಣ? 750 ಜಂಕ್ಷನ್‌ಗಳ ಬಗ್ಗೆ ಜಿಬಿಎಗೆ ವರದಿ ಸಲ್ಲಿಸಿದ ಪೊಲೀಸರು!

For Dai;y Updates Join Our whatsapp Group

ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಬೆಂಗಳೂರು ಸಂಚಾರಿ ಪೊಲೀಸರು ಮಹತ್ವದ ವರದಿ ಸಿದ್ಧಪಡಿಸಿ ಬೆಂಗಳೂರು ಗ್ರೇಟರ್ ಅಥಾರಿಟಿಗೆ ಸಲ್ಲಿಸಿದ್ದಾರೆ.

ಬೆಂಗಳೂರು ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಉಂಟಾಗುತ್ತಿರುವ ಸಂಚಾರ ದಟ್ಟಣೆ ಕುರಿತು ವರದಿ ನೀಡುವಂತೆ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಸಂಚಾರಿ ಪೊಲೀಸರಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯಂತೆ ಸಂಚಾರಿ ಪೊಲೀಸ್ ವಿಭಾಗವು ಸಮಸ್ಯೆಗಳ ಪಟ್ಟಿ ಮಾಡಿ ಪರಿಹಾರ ಕ್ರಮಗಳ ಬಗ್ಗೆ ವರದಿ ಸಲ್ಲಿಸಿದೆ.

ನಗರದ ಸುಮಾರು 750 ಜಂಕ್ಷನ್‌ಗಳಲ್ಲಿ ರಸ್ತೆ ಸಮಸ್ಯೆಗಳನ್ನು ಸರಿಪಡಿಸುವಂತೆ ಸಂಚಾರಿ ಪೊಲೀಸರು ಜಿಬಿಎಗೆ ಮನವಿ ಮಾಡಿದ್ದಾರೆ. ರಸ್ತೆ ಗುಂಡಿಗಳು, ಹದಗೆಟ್ಟ ರಸ್ತೆಗಳು ಹಾಗೂ ಸಿಗ್ನಲ್‌ಗಳ ಬಳಿ ಇರುವ ಸಮಸ್ಯೆಗಳಿಂದ ವಾಹನಗಳ ಸಂಚಾರ ನಿಧಾನವಾಗುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಜಂಕ್ಷನ್‌ಗಳಲ್ಲಿ ರಸ್ತೆ ಸರಿಯಾಗಿಲ್ಲದ ಕಾರಣ ವಾಹನಗಳು ಸಂಚರಿಸಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಿವೆ. ಇದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಹೀಗಾಗಿ ಸಿಗ್ನಲ್ ಇಂಟರ್‌ಸೆಕ್ಷನ್‌ಗಳಲ್ಲಿನ ರಸ್ತೆಯನ್ನು ವೈಜ್ಞಾನಿಕವಾಗಿ ಸರಿಪಡಿಸುವಂತೆ ಪೊಲೀಸರು ಸಲಹೆ ನೀಡಿದ್ದಾರೆ.

ನಗರದ ಟ್ರಾಫಿಕ್ ಸಮಸ್ಯೆಗೆ ಕಾರಣವಾಗುತ್ತಿರುವ ವಿವಿಧ ಅಂಶಗಳನ್ನು ಗುರುತಿಸಿರುವ ಸಂಚಾರಿ ಪೊಲೀಸರು, ಅವುಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಜಿಬಿಎಗೆ ಮನವಿ ಮಾಡಿದ್ದಾರೆ.

ಸದ್ಯ ಈ ವರದಿಯ ಆಧಾರದ ಮೇಲೆ ಜಿಬಿಎ ಯಾವ ಕ್ರಮಗಳನ್ನು ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img