ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಲಯನ್ಸ್ ಕ್ಲಬ್‌ನ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರವೀಣ ವಾರಕರ ಹಾಗೂ ಕಾರ್ಯದರ್ಶಿಯಾಗಿ ಲಿಂಗರಾಜ ತೋಟದ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಡಾ. ನವೀನ ಹಿರೇಗೌಡರ ಮತ್ತು ರಾಜಣ್ಣ ಮಲ್ಲಾಡದ, ಸಹ ಕಾರ್ಯದರ್ಶಿಯಾಗಿ ರೇಣುಕಪ್ರಸಾದ ಹಿರೇಮಠ, ಖಜಾಂಚಿಯಾಗಿ ರೇಣುಕಪ್ರಸಾದ ಶಿಗ್ಲಿಮಠ ಆಯ್ಕೆಯಾಗಿದ್ದಾರೆ.
ಲಯನ್ಸ್ ಕ್ಲಬ್‌ನ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅಮೃತಾ ವಾರಕರ, ಕಾರ್ಯದರ್ಶಿಯಾಗಿ ಅಪರ್ಣಾ ತೋಟದ ಹಾಗೂ ಖಜಾಂಚಿಯಾಗಿ ಪ್ರಿಯಾ ಶಿಗ್ಲಿಮಠ ಆಯ್ಕೆಯಾಗಿದ್ದಾರೆ.
ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 9ರಂದು ಗುರುವಾರ ಸಂಜೆ 7 ಗಂಟೆಗೆ ಮುಂಡರಗಿ ರಸ್ತೆಯ ಲಯನ್ಸ್ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ. ಲಯನ್ಸ್ ಕ್ಲಬ್‌ನ ದ್ವಿತೀಯ ಉಪ ಜಿಲ್ಲಾ ಗವರ್ನರ್ ಗವಿಸಿದ್ದಪ್ಪ ಮುದ್ಗಲ್ ಪದಗ್ರಹಣ ನೆರವೇರಿಸಲಿದ್ದು, ನಿಕಟಪೂರ್ವ ಜಿಲ್ಲಾ ಗವರ್ನರ್ ಅನಂತ ಪೋತ್ನೀಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.



