HomeIndia Newsವಯನಾಡ್‌ನಲ್ಲಿ ಭೀಕರ ಭೂಕುಸಿತ; 3 ಮಂದಿ ಸಾವು, ಐವರಿಗಾಗಿ ಮುಂದುವರಿದ ಶೋಧ ಕಾರ್ಯ!

ವಯನಾಡ್‌ನಲ್ಲಿ ಭೀಕರ ಭೂಕುಸಿತ; 3 ಮಂದಿ ಸಾವು, ಐವರಿಗಾಗಿ ಮುಂದುವರಿದ ಶೋಧ ಕಾರ್ಯ!

For Dai;y Updates Join Our whatsapp Group

ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೂವರು ಮೃತಪಟ್ಟಿದ್ದು, ಐವರು ನಾಪತ್ತೆಯಾಗಿದ್ದಾರೆ.

ಮೇಪ್ಪಾಡಿ ಸಮೀಪದ ಕಲ್ಲಾಡಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ.

ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಆನೆಕಂಪೋಯಿಲ್-ಮೇಪ್ಪಾಡಿ ಸುರಂಗ ರಸ್ತೆ ಯೋಜನೆ ಕಾಮಗಾರಿ ನಡೆಯುತ್ತಿದ್ದ ಸ್ಥಳದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ.

ಈ ದುರಂತದಿಂದ ಒಟ್ಟು 18 ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಲ್ಲಿ ಮೂವರು ಮೃತಪಟ್ಟಿದ್ದು, 10 ಮಂದಿಯನ್ನು ಮೇಪ್ಪಾಡಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮಣ್ಣಿನಡಿ ಸಿಲುಕಿರುವ ಐವರಿಗಾಗಿ ರಕ್ಷಣಾ ತಂಡಗಳು ತೀವ್ರ ಶೋಧ ಕಾರ್ಯ ನಡೆಸುತ್ತಿವೆ.

ಮುನ್ನೆಚ್ಚರಿಕೆ ಕ್ರಮವಾಗಿ ಭೂಕುಸಿತ ಪೀಡಿತ ಪ್ರದೇಶದ ಸುತ್ತಮುತ್ತ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ಕಾರ್ಮಿಕರು ಸ್ಥಳದಲ್ಲಿ ಇರಲಿಲ್ಲ:

ಘಟನೆ ನಡೆದ ವೇಳೆ ಕಾಮಗಾರಿ ಸ್ಥಳದಲ್ಲಿ ಯಾವುದೇ ಕಾರ್ಮಿಕರು ಕೆಲಸ ಮಾಡುತ್ತಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣ್ಣಿನಡಿ ಸಿಲುಕಿರುವವರು ಎಂಜಿನಿಯರ್‌ಗಳು ಮತ್ತು ಭದ್ರತಾ ಸಿಬ್ಬಂದಿಯಾಗಿರಬಹುದು ಎಂದು ಶಂಕಿಸಲಾಗಿದೆ.

“ಆ ಸಮಯದಲ್ಲಿ ಕಾಮಗಾರಿ ನಡೆಯುತ್ತಿದ್ದರೆ ದುರಂತದ ಪ್ರಮಾಣ ಇನ್ನಷ್ಟು ಹೆಚ್ಚಾಗುತ್ತಿತ್ತು” ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img