HomeCrime Newsಆಂಬುಲೆನ್ಸ್ʼಗೆ ದಾರಿ ಬಿಡದೆ ವೀಲಿಂಗ್: ಆರು ಅಪ್ರಾಪ್ತರು ಪೊಲೀಸರ ವಶಕ್ಕೆ

ಆಂಬುಲೆನ್ಸ್ʼಗೆ ದಾರಿ ಬಿಡದೆ ವೀಲಿಂಗ್: ಆರು ಅಪ್ರಾಪ್ತರು ಪೊಲೀಸರ ವಶಕ್ಕೆ

ಬೆಂಗಳೂರು: ಆಂಬುಲೆನ್ಸ್‌ಗೆ ದಾರಿ ಬಿಡದೆ ನಡುರಸ್ತೆಯಲ್ಲೇ ವೀಲಿಂಗ್ ಮಾಡಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಸಂಚಾರಿ ಪೊಲೀಸರು ಆರು ಅಪ್ರಾಪ್ತರನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಜುಲೈ 4ರ ಮಧ್ಯರಾತ್ರಿ ನಡೆದ ಘಟನೆಯಲ್ಲಿ ಕೆಲ ಯುವಕರು ರಸ್ತೆಯ ಮಧ್ಯಭಾಗದಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡುತ್ತಾ ಅಂಬುಲೆನ್ಸ್ ಸೇರಿದಂತೆ ಇತರೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದ್ದರು. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಯಶವಂತಪುರ ಸಂಚಾರಿ ಪೊಲೀಸರು ಸಿಸಿಟಿವಿ ದೃಶ್ಯಗಳು ಹಾಗೂ ಇತರೆ ಮಾಹಿತಿಗಳ ಆಧಾರದಲ್ಲಿ ತನಿಖೆ ನಡೆಸಿ, ವೀಲಿಂಗ್‌ನಲ್ಲಿ ಭಾಗಿಯಾಗಿದ್ದ ಆರು ಅಪ್ರಾಪ್ತರನ್ನು ಗುರುತಿಸಿ ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ಮತ್ತು ಕಾನೂನು ಕ್ರಮ ಮುಂದುವರಿದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img