HomeKarnataka NewsSIR ಕರ್ತವ್ಯಕ್ಕೆ ತೆರಳಿದ್ದ BLOಗೆ ಜಾತಿ ನಿಂದನೆ ಆರೋಪ: ಮಹಿಳೆ ವಿರುದ್ಧ ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ...

SIR ಕರ್ತವ್ಯಕ್ಕೆ ತೆರಳಿದ್ದ BLOಗೆ ಜಾತಿ ನಿಂದನೆ ಆರೋಪ: ಮಹಿಳೆ ವಿರುದ್ಧ ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲು

For Dai;y Updates Join Our whatsapp Group

ಮಂಗಳೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕರ್ತವ್ಯಕ್ಕೆ ತೆರಳಿದ್ದ ದಲಿತ ಸಮುದಾಯದ ಬೂತ್‌ ಮಟ್ಟದ ಅಧಿಕಾರಿ (ಬಿಎಲ್‌ಒ) ಅವರಿಗೆ ಜಾತಿ ನಿಂದನೆ ಮಾಡಿ ಅವಮಾನಿಸಲಾಗಿದೆ ಎಂಬ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ಕೇಳಿಬಂದಿದೆ.

ಈ ಸಂಬಂಧ ಮಹಿಳೆಯೊಬ್ಬರ ವಿರುದ್ಧ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯಾಗಿರುವ ಬಿಎಲ್‌ಒ, ಜುಲೈ 6ರಂದು ಎಸ್‌ಐಆರ್ ಪ್ರಕ್ರಿಯೆಗಾಗಿ ಎಎಲ್‌ಒ ಮಾಧವ್ ಅವರೊಂದಿಗೆ ಶಿರ್ಲಾಲು ಗ್ರಾಮದ ಪಲ್ಲದೋಡಿ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಅವರ ಮನೆಗೆ ತೆರಳಿದ್ದರು.

ಮನೆಯ ಅಂಗಳಕ್ಕೆ ಪ್ರವೇಶಿಸುತ್ತಿದ್ದ ವೇಳೆ, “ನೀನು ಅಲ್ಲಿಯೇ ನಿಲ್ಲು, ನಿಮ್ಮ ಜಾತಿಯವರು ಈ ಕಡೆ ಬರಬಾರದು” ಎಂದು ಹೇಳಿ ಮನೆಯ ಸಿಟ್‌ಔಟ್‌ಗೆ ಪ್ರವೇಶಿಸದಂತೆ ಮೆಟ್ಟಿಲಿನ ಬಳಿಯೇ ತಡೆದು ನಿಲ್ಲಿಸಲಾಯಿತು. ಈ ಮೂಲಕ ಜಾತಿ ನಿಂದನೆ ಮಾಡಿ ಸಾರ್ವಜನಿಕವಾಗಿ ಅವಮಾನಿಸಲಾಗಿದೆ ಎಂದು ಬಿಎಲ್‌ಒ ಜುಲೈ 7ರಂದು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಆರೋಪಿ ಯಶೋಧ ಆಚಾರಿ ವಿರುದ್ಧ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ-2015ರ ಸೆಕ್ಷನ್ 3(1)(r) ಹಾಗೂ 3(2)(va) ಅಡಿಯಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕರ್ನಾಟಕದಲ್ಲಿ ಎಸ್‌ಐಆರ್ ಕರ್ತವ್ಯದ ವೇಳೆ ಜಾತಿ ನಿಂದನೆ ಆರೋಪದಡಿ ದಾಖಲಾಗಿರುವ ಮೊದಲ ಪ್ರಕರಣ ಇದಾಗಿದೆ ಎಂದು ಮೂಲಗಳು ತಿಳಿಸಿವೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img