HomeKarnataka Newsಜಾತಿ ಗಣತಿ ವರದಿ ಅಧಿವೇಶನದಲ್ಲಿ ಮಂಡಿಸಲಿ; ಸರ್ಕಾರ ತನ್ನ ನಿಲುವು ಪ್ರಕಟಿಸಬೇಕು - ವಿ. ಸುನೀಲ್...

ಜಾತಿ ಗಣತಿ ವರದಿ ಅಧಿವೇಶನದಲ್ಲಿ ಮಂಡಿಸಲಿ; ಸರ್ಕಾರ ತನ್ನ ನಿಲುವು ಪ್ರಕಟಿಸಬೇಕು – ವಿ. ಸುನೀಲ್ ಕುಮಾರ್

For Dai;y Updates Join Our whatsapp Group

ಬೆಂಗಳೂರು: ಕರ್ನಾಟಕ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿ ಕುರಿತು ರಾಜ್ಯ ಸರ್ಕಾರ ತನ್ನ ಸ್ಪಷ್ಟ ನಿಲುವು ಪ್ರಕಟಿಸಿ, ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ವರದಿಯನ್ನು ಮಂಡಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ. ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.

ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ನೇತೃತ್ವದಲ್ಲಿ ಸಿದ್ಧಗೊಂಡಿರುವ ವರದಿ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ಸುಮಾರು 450 ಕೋಟಿಗೂ ಅಧಿಕ ರೂಪಾಯಿ ಸಾರ್ವಜನಿಕರ ತೆರಿಗೆ ಹಣ ವೆಚ್ಚ ಮಾಡಿ ನಡೆಸಲಾದ ಸಮೀಕ್ಷೆಯ ವರದಿಯ ಕುರಿತು ಚರ್ಚೆಗೆ ಬಿಜೆಪಿ ಸಂಪೂರ್ಣ ಸಿದ್ಧವಿದೆ. ವಿಧಾನಮಂಡಲ ಅಧಿವೇಶನದಲ್ಲಿ ಈ ವಿಷಯಕ್ಕೆ ಪ್ರತ್ಯೇಕ ಸಮಯ ನಿಗದಿಪಡಿಸಿ ವರದಿಯಲ್ಲಿರುವ ಅಂಶಗಳನ್ನು ಸಾರ್ವಜನಿಕವಾಗಿ ಚರ್ಚೆಗೆ ತರಬೇಕು ಎಂದು ಅವರು ಹೇಳಿದರು.

ಒಬಿಸಿ ಸಮುದಾಯದ ಪರವಾಗಿ ಮಾತನಾಡುವುದಾಗಿ ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರ ಭಾಷಣದಲ್ಲಿ ಹಿಂದುಳಿದ ವರ್ಗಗಳ ಆಯೋಗ ಅಥವಾ ಜಾತಿ ಗಣತಿ ಕುರಿತು ಯಾವುದೇ ಪ್ರಸ್ತಾಪ ಮಾಡಿಲ್ಲ. ಹೊರಗೆ ಅಹಿಂದ ಹಾಗೂ ಒಬಿಸಿ ಪರವಾಗಿ ಮಾತನಾಡುವ ಸರ್ಕಾರ, ಬಜೆಟ್‌ನಲ್ಲೂ ಈ ಕುರಿತು ಯಾವುದೇ ಉಲ್ಲೇಖ ಮಾಡಿಲ್ಲ ಎಂದು ಟೀಕಿಸಿದರು.

ಸರ್ಕಾರದ ಬಳಿ ರಾಜ್ಯದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ದತ್ತಾಂಶವೇ ಇಲ್ಲದಿದ್ದರೆ ಅಭಿವೃದ್ಧಿ ಯೋಜನೆಗಳನ್ನು ಹೇಗೆ ರೂಪಿಸಲಾಗುತ್ತದೆ? ಜನರಿಗೆ ಸೌಲಭ್ಯಗಳನ್ನು ಯಾವ ಆಧಾರದ ಮೇಲೆ ನೀಡಲಾಗುತ್ತದೆ? ಸರ್ಕಾರ ಘೋಷಿಸುವ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿಯೂ ವಿಫಲವಾಗಿದೆ ಎಂದು ಆರೋಪಿಸಿದರು.

ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧುಸೂದನ್ ನಾಯಕ್ ವರದಿಯನ್ನು ತರಾತುರಿಯಲ್ಲಿ ಸ್ವೀಕರಿಸಿದ್ದಾರೆ. ಇದಕ್ಕೂ ಮೊದಲು ಕಾಂತರಾಜು ವರದಿಯನ್ನು ಸರ್ಕಾರ ಸ್ವೀಕರಿಸಿರಲಿಲ್ಲ. ಬಳಿಕ ಜಯಪ್ರಕಾಶ್ ಹೆಗ್ಡೆ ವರದಿಯನ್ನು ಸಚಿವ ಸಂಪುಟದ ಮುಂದೆ ತಂದರೂ, ಸಹೋದ್ಯೋಗಿಗಳ ವಿರೋಧದಿಂದ ಅದನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲು ಹಿಂದೇಟು ಹಾಕಲಾಯಿತು ಎಂದು ಹೇಳಿದರು.

ರಾಹುಲ್ ಗಾಂಧಿ ಸೂಚನೆಯ ಮೇರೆಗೆ ಜಯಪ್ರಕಾಶ್ ಹೆಗ್ಡೆ ವರದಿಯನ್ನು ಕೈಬಿಡಲಾಯಿತು. ಈಗ ಮಧುಸೂದನ್ ನಾಯಕ್ ವರದಿಯನ್ನೂ ಇದೇ ಸರ್ಕಾರ ಕಡೆಗಣಿಸುವ ಸಾಧ್ಯತೆ ಇದೆ. ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಈ ವರದಿಯನ್ನೂ ‘ಘನತ್ಯಾಜ್ಯ ವಿಲೇವಾರಿ’ ಮಾಡುವಂತಾಗಲಿದೆ ಎಂದು ವಿ. ಸುನೀಲ್ ಕುಮಾರ್ ವ್ಯಂಗ್ಯವಾಡಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img