ಬೆಂಗಳೂರು: ಜಾಗತಿಕ ಆರ್ಥಿಕ ಬೆಳವಣಿಗೆಗಳ ಪರಿಣಾಮವಾಗಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಅಮೆರಿಕ–ಇರಾನ್ ನಡುವಿನ ಉದ್ವಿಗ್ನತೆ ಹಾಗೂ ತೈಲ ಮಾರುಕಟ್ಟೆಯಲ್ಲಿನ ಬದಲಾವಣೆಗಳಿಂದ ಹೂಡಿಕೆದಾರರ ಗಮನ ಚಿನ್ನ-ಬೆಳ್ಳಿ ಮಾರುಕಟ್ಟೆಯ ಮೇಲೂ ಪರಿಣಾಮ ಬೀರಿದೆ.
ಈ ನಡುವೆ ಬೆಳ್ಳಿ ದರದಲ್ಲಿ ಭಾರೀ ಕುಸಿತವಾಗಿದ್ದು, ಚಿನ್ನದ ಬೆಲೆಯಲ್ಲಿ ಅಲ್ಪ ಪ್ರಮಾಣದ ಏರಿಕೆ ಕಂಡುಬಂದಿದೆ ಎಂದು ಗುಡ್‌ರಿಟರ್ನ್ಸ್ ವರದಿ ತಿಳಿಸಿದೆ.
ಜುಲೈ 9, 2026 (ಗುರುವಾರ) 24 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ 11 ರೂಪಾಯಿ ಏರಿಕೆಯಾಗಿ 14,324 ರೂ.ಗೆ ತಲುಪಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 110 ರೂಪಾಯಿ ಹೆಚ್ಚಳವಾಗಿ 1,43,240 ರೂ. ಆಗಿದೆ.
22 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ 10 ರೂಪಾಯಿ ಏರಿಕೆಯಾಗಿ 13,130 ರೂ. ಆಗಿದ್ದು, 10 ಗ್ರಾಂ ಚಿನ್ನದ ಬೆಲೆ 100 ರೂಪಾಯಿ ಹೆಚ್ಚಳವಾಗಿ 1,31,300 ರೂ.ಗೆ ತಲುಪಿದೆ.
ಬೆಂಗಳೂರು ಮಾರುಕಟ್ಟೆಯಲ್ಲಿ ಶುದ್ಧ ಚಿನ್ನದ (24 ಕ್ಯಾರೆಟ್) ಪ್ರತಿ ಗ್ರಾಂ ದರ 14,526 ರೂ. ದಾಖಲಾಗಿದೆ.
ಇನ್ನು ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದೆ. ಇಂದು ಬೆಳ್ಳಿ ದರದಲ್ಲಿ 10,000 ರೂ. ಕುಸಿತವಾಗಿದ್ದು, ಪ್ರತಿ ಗ್ರಾಂ ಬೆಲೆ 235 ರೂ. ಆಗಿದೆ. ಅದರಂತೆ, ಒಂದು ಕೆಜಿ ಬೆಳ್ಳಿಯ ದರ 2,35,000 ರೂ.ಗೆ ಇಳಿಕೆಯಾಗಿದೆ.
ಜಾಗತಿಕ ಮಾರುಕಟ್ಟೆಯ ಬೆಳವಣಿಗೆಗಳು ಮುಂದಿನ ದಿನಗಳಲ್ಲೂ ಚಿನ್ನ ಹಾಗೂ ಬೆಳ್ಳಿ ಬೆಲೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.



