HomeCrime Newsಸ್ಟಾಕ್ ಮಾರ್ಕೆಟ್ʼನಲ್ಲಿ ನಷ್ಟ: ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ!

ಸ್ಟಾಕ್ ಮಾರ್ಕೆಟ್ʼನಲ್ಲಿ ನಷ್ಟ: ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ!

For Dai;y Updates Join Our whatsapp Group

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಗ್ರಾಮದಲ್ಲಿ ಯುವಕನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಕವನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಈ ಘಟನೆ ನಾಪೋಕ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕವನ್ ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಕಳೆದುಕೊಂಡಿದ್ದರಿಂದ ಮನನೊಂದು ಈ ಕೃತ್ಯಕ್ಕೆ ಮುಂದಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ.

ಸದ್ಯ ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img