HomeGadag Newsಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ: ಬಸವರಾಜ ಬೊಮ್ಮಾಯಿ

ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ: ಬಸವರಾಜ ಬೊಮ್ಮಾಯಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ತಲೆದೋರಿರುವ ಭೀಕರ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಗದಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಶೇ.50ಕ್ಕೂ ಹೆಚ್ಚು ತಾಲೂಕುಗಳು ಬರದ ಸಂಕಷ್ಟದಲ್ಲಿದ್ದರೂ ಸರ್ಕಾರ ಯಾವುದೇ ಕಾರ್ಯಯೋಜನೆ ರೂಪಿಸಿಲ್ಲ. ಗದಗ ಜಿಲ್ಲೆಯಲ್ಲಿ ಕೇವಲ ಶೇ.30ರಷ್ಟು ಮಾತ್ರ ಬಿತ್ತನೆಯಾಗಿದ್ದು, ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ಎನ್‌ಡಿಆರ್‌ಎಫ್ ನಿಧಿಯಿಂದ ರೈತರಿಗೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಕೃಷಿ ಇಲಾಖೆ ನಿಷ್ಕ್ರಿಯವಾಗಿದ್ದು, ರೈತರಿಗೆ ಪರ್ಯಾಯ ಬೆಳೆ ಕುರಿತು ಯಾವುದೇ ಮಾರ್ಗದರ್ಶನ ಸಿಕ್ಕಿಲ್ಲ. ಗದಗ ನಗರದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುತ್ತಿದ್ದು, ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲೆಗೆ ಉಸ್ತುವಾರಿ ಸಚಿವರನ್ನು ನೇಮಿಸಿ 15 ದಿನಗಳಾದರೂ ಅವರು ಜಿಲ್ಲೆಗೆ ಭೇಟಿ ನೀಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ ಬೊಮ್ಮಾಯಿ, ಸಂಕಷ್ಟದ ಸಮಯದಲ್ಲಿ ಜನರೊಂದಿಗೆ ನಿಲ್ಲದ ಸರ್ಕಾರ ಬೇಜವಾಬ್ದಾರಿಯಾಗಿದೆ ಎಂದು ಟೀಕಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img