HomeKarnataka Newsಮೈಸೂರು ವಿವಿಯಲ್ಲಿ ಎಸ್. ಜಾನಕಿ ಹೆಸರಿನಲ್ಲಿ ಸಂಗೀತ ಅಧ್ಯಯನ ಪೀಠ ಸ್ಥಾಪಿಸಿ: ಜಯಮಾಲಾ ಮನವಿ

ಮೈಸೂರು ವಿವಿಯಲ್ಲಿ ಎಸ್. ಜಾನಕಿ ಹೆಸರಿನಲ್ಲಿ ಸಂಗೀತ ಅಧ್ಯಯನ ಪೀಠ ಸ್ಥಾಪಿಸಿ: ಜಯಮಾಲಾ ಮನವಿ

For Dai;y Updates Join Our whatsapp Group

ಮೈಸೂರು: ಭಾರತೀಯ ಸಂಗೀತ ಲೋಕದ ದಿಗ್ಗಜ ಗಾಯಕಿ ಎಸ್. ಜಾನಕಿ ಅವರ ನೆನಪಿಗಾಗಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂಗೀತ ಅಧ್ಯಯನ ಪೀಠವನ್ನು ಸ್ಥಾಪಿಸಬೇಕು ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಹಾಗೂ ಹಿರಿಯ ನಟಿ ಜಯಮಾಲಾ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇರಿಸಲಾಗಿದ್ದ ಎಸ್. ಜಾನಕಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಯಮಾಲಾ, ಜಾನಕಿ ಅಮ್ಮನ ಸಂಗೀತ ಸೇವೆಯನ್ನು ಸ್ಮರಿಸಿದರು.

“1975ರಿಂದ ಜಾನಕಮ್ಮ ಅವರನ್ನು ಬಲ್ಲೆ. ಪ್ರೇಮದ ಕಾಣಿಕೆ ಚಿತ್ರದ ಸಂದರ್ಭದಲ್ಲಿ ಅವರ ಪರಿಚಯವಾಯಿತು. ಅವರಲ್ಲಿದ್ದ ಗಾಯನದ ವೈವಿಧ್ಯತೆ ಬೇರೆ ಯಾರಲ್ಲೂ ಕಾಣಲು ಸಾಧ್ಯವಿಲ್ಲ. ಭಾರತೀಯ ಸಂಗೀತ ಇತಿಹಾಸದಲ್ಲಿ ಅವರದ್ದು ವಿಶೇಷ ದಾಖಲೆ” ಎಂದು ಹೇಳಿದರು.

ಎಸ್. ಜಾನಕಿ ಅವರು ಭಾರತೀಯ ಚಿತ್ರರಂಗದ ಶ್ರೇಷ್ಠ ಗಾನ ಕೋಗಿಲೆಯಾಗಿದ್ದರು. ಅವರನ್ನು ಕಳೆದುಕೊಂಡಿರುವುದು ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಿದೆ. ನಮ್ಮ ಯಶಸ್ಸಿನ ಹಿಂದೆ ಜಾನಕಿ ಅವರ ಕೊಡುಗೆ ಇದೆ ಎಂದು ಜಯಮಾಲಾ ತಿಳಿಸಿದರು.

“ಜಾನಕಮ್ಮ ಮೈಸೂರಿನ ಸೊಸೆ. ಇದೇ ಮಣ್ಣಿನಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಅವರ ನೆನಪನ್ನು ಶಾಶ್ವತವಾಗಿಸಲು ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂಗೀತ ಅಧ್ಯಯನ ಪೀಠ ಆರಂಭಿಸಬೇಕು. ಈ ಮೂಲಕ ಜಾನಕಮ್ಮ ಅವರನ್ನು ನಮ್ಮೊಂದಿಗೆ ಉಳಿಸಿಕೊಳ್ಳುವ ಕೆಲಸ ಮಾಡಬೇಕು” ಎಂದು ಸರ್ಕಾರಕ್ಕೆ ಮನವಿ ಮಾಡಿದರು.

1957ರಲ್ಲಿ ಗಾಯನ ಆರಂಭಿಸಿದ್ದ ಎಸ್. ಜಾನಕಿ ಅವರು ಆರು ದಶಕಗಳಿಗೂ ಹೆಚ್ಚು ಕಾಲ ಸಂಗೀತ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದ ಅವರು, ಕನ್ನಡದಲ್ಲಿ ಅಪಾರ ಸಂಖ್ಯೆಯ ಗೀತೆಗಳನ್ನು ಹಾಡಿ ಕನ್ನಡಿಗರ ಮನಗೆದ್ದಿದ್ದರು.

ಅವರು 4 ರಾಷ್ಟ್ರೀಯ ಪ್ರಶಸ್ತಿ, 33 ರಾಜ್ಯ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿದ್ದರು. ಅವರ ನಿಧನದಿಂದ ಭಾರತೀಯ ಸಂಗೀತ ಲೋಕದಲ್ಲಿ ತುಂಬಲಾರದ ನಷ್ಟ ಉಂಟಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img