ಬೆಂಗಳೂರು: ಬೆಂಗಳೂರಿನಲ್ಲಿ ನವವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ಘಟನೆ ನಡೆದಿದ್ದು, ಮೃತರನ್ನು ಶ್ವೇತಾ (25) ಎಂದು ಗುರುತಿಸಲಾಗಿದೆ.
ಶ್ವೇತಾ ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ಡೆತ್ನೋಟ್ ಬರೆದಿಟ್ಟಿರುವ ಮಾಹಿತಿ ಲಭ್ಯವಾಗಿದೆ.
ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಶ್ವೇತಾ ಪ್ರೇಮ ವಿವಾಹವಾಗಿದ್ದರು. ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಅವರು, ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವುದು ಕುಟುಂಬಸ್ಥರು ಹಾಗೂ ಪರಿಚಿತರಲ್ಲಿ ಆಘಾತ ಮೂಡಿಸಿದೆ.
ಶ್ವೇತಾ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಅವರು ಬರೆದಿಟ್ಟಿದ್ದಾರೆ ಎನ್ನಲಾದ ಡೆತ್ನೋಟ್ನಲ್ಲಿ ಏನಿದೆ ಎಂಬ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರೇಮ ವಿವಾಹವಾಗಿ ಕೇವಲ ನಾಲ್ಕು ತಿಂಗಳಲ್ಲೇ ಶ್ವೇತಾ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ, ಘಟನೆಗೆ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಟುಂಬಸ್ಥರು ಹಾಗೂ ಸಂಬಂಧಪಟ್ಟವರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆಯ ಬಳಿಕ ಶ್ವೇತಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರಬೇಕಿದೆ.



