ಗದಗ: ಗದಗ-ಬೆಟಗೇರಿ ಅವಳಿ ನಗರಕ್ಕೆ ತುಂಗಭದ್ರಾ ಜಲಾಶಯದಿಂದ ಕುಡಿಯುವ ನೀರು ಪೂರೈಸುವ ಮುಖ್ಯ ಪೈಪ್‌ಲೈನ್‌ಗೆ ಕಿಡಿಗೇಡಿಗಳು ಕಲ್ಲು ತುಂಬಿದ ಪರಿಣಾಮ ಕೆಲಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾದ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ಗ್ರಾಮದ ಬಳಿ ನಡೆದಿದೆ.
https://youtu.be/n3LHjMQ6F_o?si=4QaqvcdSCXpBATIK
ಕಿಡಿಗೇಡಿಗಳು ಪೈಪ್ ಒಳಗೆ ಕಲ್ಲು ತುಂಬಿದ್ದರಿಂದ ನೀರಿನ ಹರಿವಿಗೆ ಅಡ್ಡಿಯಾಗಿದ್ದು, ಸಮಸ್ಯೆ ಉಂಟಾಗಿದೆ. ವಿಷಯ ತಿಳಿಯುತ್ತಿದ್ದಂತೆ ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ನಗರಸಭೆ ಇಂಜಿನಿಯರ್ ಲಕ್ಷ್ಮಣ ಜೋಗದಂಡಕರ್ ಹಾಗೂ ಇನ್ಸ್‌ಪೆಕ್ಟರ್ ಸಿದ್ದರಾಮೇಶ್ವರ ಗಡೇದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ನಗರಸಭೆ ಸಿಬ್ಬಂದಿಯಿಂದ ಪೈಪ್‌ನೊಳಗಿದ್ದ ಕಲ್ಲುಗಳನ್ನು ತೆರವುಗೊಳಿಸಿ ನೀರು ಸರಬರಾಜು ವ್ಯವಸ್ಥೆಯನ್ನು ಪುನಃ ಸರಿಪಡಿಸಲಾಯಿತು.
ಸಾರ್ವಜನಿಕರ ಕುಡಿಯುವ ನೀರಿನ ವ್ಯವಸ್ಥೆಗೆ ಅಡ್ಡಿಪಡಿಸಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.



