HomeKarnataka Newsಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯ; ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯ; ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

For Dai;y Updates Join Our whatsapp Group

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (Artificial Intelligence–AI) ವಿಶ್ವವಿದ್ಯಾಲಯವನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿ ಈ ವಿಶ್ವವಿದ್ಯಾಲಯ ಸ್ಥಾಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಡೆದ ಗೂಗಲ್ ಐ/ಒ ಕನೆಕ್ಟ್ ಇಂಡಿಯಾ 2026 ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಆಡಳಿತ ಮತ್ತು ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳುವತ್ತ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಎಐ ಕ್ಷೇತ್ರದಲ್ಲಿ ಪ್ರತಿಭೆಗಳನ್ನು ಬೆಳೆಸುವುದು, ಸುಧಾರಿತ ಸಂಶೋಧನೆಗೆ ಉತ್ತೇಜನ ನೀಡುವುದು ಹಾಗೂ ಶಿಕ್ಷಣ ಸಂಸ್ಥೆಗಳು, ಉದ್ಯಮ ವಲಯ ಮತ್ತು ಸರ್ಕಾರದ ನಡುವೆ ಸಮನ್ವಯ ಸಾಧಿಸುವ ಉದ್ದೇಶದಿಂದ ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದರು.

ಎಐ ತಂತ್ರಜ್ಞಾನವನ್ನು ಶಿಕ್ಷಣ, ಆರೋಗ್ಯ, ಕೃಷಿ, ಸರ್ಕಾರಿ ಸೇವೆಗಳು ಹಾಗೂ ಸಣ್ಣ ಕೈಗಾರಿಕೆಗಳಲ್ಲಿ ವ್ಯಾಪಕವಾಗಿ ಬಳಸುವ ಮೂಲಕ ಜನಜೀವನದಲ್ಲಿ ಮಹತ್ವದ ಬದಲಾವಣೆ ತರಲು ಸರ್ಕಾರ ಯೋಜನೆ ರೂಪಿಸಿದೆ. ಎಐ ಆಧಾರಿತ ಬೋಧನಾ ವಿಧಾನಗಳಿಂದ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವುದು, ರೋಗಗಳ ಮುಂಚಿತ ಪತ್ತೆ ಹಾಗೂ ಉತ್ತಮ ವೈದ್ಯಕೀಯ ಸೇವೆಗಳನ್ನು ಒದಗಿಸುವುದು, ರೈತರಿಗೆ ಎಐ ಆಧಾರಿತ ಸಲಹಾ ಸೇವೆಗಳನ್ನು ನೀಡುವುದು ಮತ್ತು ಸರ್ಕಾರಿ ಸೇವೆಗಳನ್ನು ಇನ್ನಷ್ಟು ವೇಗವಾಗಿ ಹಾಗೂ ಪಾರದರ್ಶಕವಾಗಿ ಜನರಿಗೆ ತಲುಪಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಎಐ ಆಧಾರಿತ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕತೆ ಹೆಚ್ಚಿಸಿಕೊಳ್ಳಲು ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

“ಭಾರತದ ನಾವೀನ್ಯತೆಯ ರಾಜಧಾನಿ ಮತ್ತು ವಿಶ್ವದ ಪ್ರಮುಖ ತಂತ್ರಜ್ಞಾನ ಕೇಂದ್ರಗಳಲ್ಲಿ ಒಂದಾದ ಬೆಂಗಳೂರಿನಲ್ಲಿ ಗೂಗಲ್ ಐ/ಒ ಕನೆಕ್ಟ್ ಇಂಡಿಯಾ 2026 ಆಯೋಜನೆಯಾಗಿರುವುದು ಹೆಮ್ಮೆಯ ಸಂಗತಿ. ತಂತ್ರಜ್ಞಾನವು ಇಲ್ಲಿ ಕೇವಲ ಉದ್ಯಮವಲ್ಲ, ಜನರ ದೈನಂದಿನ ಬದುಕಿನ ಭಾಗವಾಗಿದೆ” ಎಂದು ಅವರು ಹೇಳಿದರು.

ಪ್ರತಿ ಪೀಳಿಗೆಗೂ ಮಾನವ ನಾಗರಿಕತೆಯ ದಿಕ್ಕನ್ನೇ ಬದಲಿಸುವ ತಂತ್ರಜ್ಞಾನವೊಂದು ದೊರೆಯುತ್ತದೆ. ಸ್ಟೀಮ್ ಎಂಜಿನ್ ಕೈಗಾರಿಕಾ ಕ್ರಾಂತಿಗೆ ಕಾರಣವಾಯಿತು, ವಿದ್ಯುತ್ ನಗರಗಳನ್ನು ರೂಪಿಸಿತು, ಇಂಟರ್‌ನೆಟ್ ಜಗತ್ತನ್ನು ಸಂಪರ್ಕಿಸಿತು, ಮೊಬೈಲ್ ತಂತ್ರಜ್ಞಾನ ಎಲ್ಲವನ್ನೂ ಕೈಗೆಟುಕುವಂತೆ ಮಾಡಿತು. ಈಗ ಕೃತಕ ಬುದ್ಧಿಮತ್ತೆ ಮಾನವ ಸಾಮರ್ಥ್ಯವನ್ನು ಹೊಸ ಹಂತಕ್ಕೆ ಕೊಂಡೊಯ್ಯುವ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img