ವಿಜಯಸಾಕ್ಷಿ ಸುದ್ದಿ, ಗದಗ: ದ್ವಾರಕಾಮಾಯಿ ಫೌಂಡೇಶನ್ ಹಾಗೂ ಅಮೃತಾ ಟೂಲ್ಸ್ ಆ್ಯಂಡ್ ಕ್ರಾಫ್ಟ್ ಪ್ರೈವೇಟ್ ಲಿಮಿಟೆಡ್, ಹೈದರಾಬಾದ್ ಸಹಯೋಗದಲ್ಲಿ ಉಂಡೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 86 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ನೋಟ್‌ಪುಸ್ತಕ, ಪೆನ್ ಹಾಗೂ ಪೆನ್ಸಿಲ್ ಕಿಟ್‌ಗಳನ್ನು ವಿತರಿಸಲಾಯಿತು.
ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಶಾಲೆಯ ಮುಖ್ಯ ಶಿಕ್ಷಕರು ಹಾಗೂ ದ್ವಾರಕಾಮಾಯಿ ಸಂಸ್ಥೆಯ ಸ್ವಯಂಸೇವಕರು ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಮಗ್ರಿಗಳನ್ನು ವಿತರಿಸಿ, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ದ್ವಾರಕಾಮಾಯಿ ಸಂಸ್ಥೆಯ ಸ್ವಯಂಸೇವಕರಾದ ಖಾಜಾವಾಲಿ ಮುಲ್ಲಾ, ಗಣೇಶ ಚವಡಿ, ಬಸವರಾಜ ಕಟಗಿ ಹಾಗೂ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



