HomeMangaloreಸುರತ್ಕಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ: ಪೋಷಕರು ಮನೆಯಲ್ಲಿದ್ದ ವೇಳೆಯೇ 5ನೇ ಮಹಡಿಯಿಂದ ಹಾರಿ ಸಾವು

ಸುರತ್ಕಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ: ಪೋಷಕರು ಮನೆಯಲ್ಲಿದ್ದ ವೇಳೆಯೇ 5ನೇ ಮಹಡಿಯಿಂದ ಹಾರಿ ಸಾವು

For Dai;y Updates Join Our whatsapp Group

ಮಂಗಳೂರು: ಸುರತ್ಕಲ್‌ನಲ್ಲಿ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಹುಬ್ಬಳ್ಳಿ ಮೂಲದ 21 ವರ್ಷದ ಮಹಾಲಕ್ಷ್ಮೀ ಎಂದು ಗುರುತಿಸಲಾಗಿದೆ.

ಶ್ರೀನಿವಾಸ್ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮಹಾಲಕ್ಷ್ಮೀ, ಸುರತ್ಕಲ್‌ನ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದರು. ಎರಡನೇ ಮಹಡಿಯ ಫ್ಲ್ಯಾಟ್‌ನಿಂದ ಹೊರಬಂದು ಐದನೇ ಮಹಡಿಗೆ ತೆರಳಿದ ಅವರು ಅಲ್ಲಿಂದ ಜಿಗಿದಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ವಿದ್ಯಾರ್ಥಿನಿ ಈ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಮಾಹಿತಿ ಲಭ್ಯವಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಆದರೆ ಮಾನಸಿಕ ಖಿನ್ನತೆಯ ಸಾಧ್ಯತೆ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಘಟನೆ ನಡೆದ ವೇಳೆ ವಿದ್ಯಾರ್ಥಿನಿಯ ಪೋಷಕರು ಕೂಡ ಫ್ಲ್ಯಾಟ್‌ನಲ್ಲಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದು, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಘಟನೆಯನ್ನು ದೃಢಪಡಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img