ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿಧಾನಸೌಧದ ಬಳಿ ಬೆಳಗಿನ ಜಾವ ಕಾರೊಂದು ಅಪಘಾತಕ್ಕೀಡಾಗಿದೆ.
ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬೆಳಗ್ಗೆ ಸುಮಾರು 7.30ರ ವೇಳೆಗೆ ವಿಧಾನಸೌಧ ಮೆಟ್ರೋ ನಿಲ್ದಾಣದಿಂದ ಇಂಡಿಯನ್ ಎಕ್ಸ್ಪ್ರೆಸ್ ಮಾರ್ಗದ ಮಧ್ಯೆ ಈ ಘಟನೆ ನಡೆದಿದೆ. ನಿಯಂತ್ರಣ ತಪ್ಪಿದ ಯುಎಸ್ ಪೋಲೊ ಕಾರು ರಸ್ತೆಯ ಪಕ್ಕದಲ್ಲಿದ್ದ ಡಿವೈಡರ್ ರೈಲಿಂಗ್ಸ್ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಚಾಲಕ ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಬೋರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದುಬರಬೇಕಿದೆ.



