ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಕಮೆಂಟ್ ಮಾಡುವವರಿಗೆ ಕಡಿವಾಣ ಹಾಕಲು ಕಠಿಣ ಕಾನೂನು ಜಾರಿಗೆ ಬಂದಿದೆ.
ಇನ್ನು ಮುಂದೆ ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿ ಸಿಕ್ಕಿಬಿದ್ದರೆ ಜೈಲು ಶಿಕ್ಷೆ ಎದುರಿಸಬೇಕಾಗುತ್ತದೆ.
2024ರ ಜುಲೈ 1ರಿಂದ ಜಾರಿಗೆ ಬಂದಿರುವ ಹೊಸ ಐಟಿ ಕಾಯ್ದೆಗಳ ಪ್ರಕಾರ, ಅಶ್ಲೀಲ ಕಮೆಂಟ್‌ಗಳಿಗೆ ಕಠಿಣ ಕ್ರಮ ಕೈಗೊಳ್ಳಬಹುದಾಗಿದೆ. ಆರೋಪ ಸಾಬೀತಾದರೆ 6 ತಿಂಗಳಿಂದ 1 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ.
ಇದಲ್ಲದೆ, ಕೆಲವು ಪ್ರಕರಣಗಳಲ್ಲಿ ಕನಿಷ್ಠ 3 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸುವ ಅವಕಾಶವೂ ಇದೆ ಎಂದು ತಿಳಿಸಲಾಗಿದೆ. ದಂಡದ ಮೊತ್ತ ಪಾವತಿಸದಿದ್ದರೆ ಜೈಲು ಶಿಕ್ಷೆ ಮುಂದುವರಿಯುವ ಸಾಧ್ಯತೆಯಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರು ಹಾಗೂ ಇತರರ ವಿರುದ್ಧ ಅವಹೇಳನಕಾರಿ, ಅಶ್ಲೀಲ ಹಾಗೂ ಮಾನಹಾನಿಕರ ಕಮೆಂಟ್‌ಗಳನ್ನು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಈ ನಿಯಮಗಳನ್ನು ಜಾರಿಗೆ ತರಲಾಗಿದೆ.
ಆನ್‌ಲೈನ್‌ನಲ್ಲಿ ಯಾವುದೇ ಪೋಸ್ಟ್ ಅಥವಾ ಕಮೆಂಟ್ ಮಾಡುವ ಮೊದಲು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.



