HomeIndia Newsಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ ಮೋದಿ ಚಾಲನೆ

For Dai;y Updates Join Our whatsapp Group

ಚಂಡೀಗಢ: ಭಾರತದ ರೈಲ್ವೆ ಇತಿಹಾಸದಲ್ಲಿ ಮಹತ್ವದ ಹೆಜ್ಜೆಯಾಗಿ ದೇಶದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚಾಲನೆ ನೀಡಿದರು. ಈ ರೈಲು ಉತ್ತರ ರೈಲ್ವೆ ವ್ಯಾಪ್ತಿಯ ಹರಿಯಾಣ ರಾಜ್ಯದ 89 ಕಿಲೋಮೀಟರ್ ಉದ್ದದ ಜಿಂದ್–ಸೋನಿಪತ್ ಮಾರ್ಗದಲ್ಲಿ ಸಂಚರಿಸಲಿದೆ.

ಭಾರತದಲ್ಲಿ ಮೊದಲ ಬಾರಿಗೆ ಹೈಡ್ರೋಜನ್ ಇಂಧನ ಕೋಶ (Hydrogen Fuel Cell) ತಂತ್ರಜ್ಞಾನವನ್ನು ರೈಲ್ವೆ ಸೇವೆಯಲ್ಲಿ ಅಳವಡಿಸಲಾಗಿದೆ. ಈ ತಂತ್ರಜ್ಞಾನದಲ್ಲಿ ಹೈಡ್ರೋಜನ್ ಇಂಧನ ಕೋಶಗಳ ಮೂಲಕ ವಿದ್ಯುತ್ ಉತ್ಪಾದಿಸಿ ರೈಲನ್ನು ಚಲಾಯಿಸಲಾಗುತ್ತದೆ. ಇದರಿಂದ ಡೀಸೆಲ್ ಬಳಕೆ ಕಡಿಮೆಯಾಗುವ ಜೊತೆಗೆ ಪರಿಸರ ಮಾಲಿನ್ಯವೂ ತಗ್ಗುವ ನಿರೀಕ್ಷೆಯಿದೆ.

ಈ ಯೋಜನೆಯ ಭಾಗವಾಗಿ ಹೈಡ್ರೋಜನ್ ಸಂಗ್ರಹಣೆ ಹಾಗೂ ಇಂಧನ ತುಂಬುವ (Refuelling) ವಿಶೇಷ ಮೂಲಸೌಕರ್ಯಗಳನ್ನೂ ಅಭಿವೃದ್ಧಿಪಡಿಸಲಾಗಿದೆ. ಹೀಗಾಗಿ ಭವಿಷ್ಯದಲ್ಲಿ ದೇಶದ ವಿವಿಧ ಮಾರ್ಗಗಳಲ್ಲಿ ಹೈಡ್ರೋಜನ್ ರೈಲುಗಳ ಸಂಚಾರಕ್ಕೆ ಇದು ಅಡಿಪಾಯವಾಗಲಿದೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಹೈಡ್ರೋಜನ್ ಚಾಲಿತ ರೈಲು ಸೇವೆಯ ಆರಂಭವು ಭಾರತದ ರೈಲ್ವೆ ಕ್ಷೇತ್ರದಲ್ಲಿ ಶುದ್ಧ ಮತ್ತು ಹಸಿರು ತಂತ್ರಜ್ಞಾನ ಅಳವಡಿಕೆಗೆ ಹೊಸ ದಿಕ್ಕು ನೀಡಲಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ಹೈಡ್ರೋಜನ್ ರೈಲುಗಳನ್ನು ಹೊಂದಿರುವ ವಿಶ್ವದ ಆಯ್ದ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರ್ಪಡೆಯಾಗಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ.

ಪ್ರಾಯೋಗಿಕ ಯೋಜನೆಯಾಗಿ ಅಭಿವೃದ್ಧಿಪಡಿಸಿರುವ ಈ ರೈಲು, ಹೈಡ್ರೋಜನ್ ಇಂಧನ ತಂತ್ರಜ್ಞಾನದ ಕಾರ್ಯಕ್ಷಮತೆಯನ್ನು ಪರೀಕ್ಷಿಸುವ ಜೊತೆಗೆ, ಪರಿಸರ ಸ್ನೇಹಿ ಮತ್ತು ಸುಸ್ಥಿರ ರೈಲು ಸಾರಿಗೆ ವ್ಯವಸ್ಥೆ ನಿರ್ಮಾಣಕ್ಕೆ ಅಗತ್ಯವಾದ ಭವಿಷ್ಯದ ಯೋಜನೆಗಳಿಗೆ ದಾರಿಯಾಗಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img