HomeIndia Newsಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಸಂಪರ್ಕ ಆರೋಪ; ಗುಜರಾತ್ ATSನಿಂದ ಐವರು ಶಂಕಿತ ಉಗ್ರರ ಬಂಧನ

ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಸಂಪರ್ಕ ಆರೋಪ; ಗುಜರಾತ್ ATSನಿಂದ ಐವರು ಶಂಕಿತ ಉಗ್ರರ ಬಂಧನ

For Dai;y Updates Join Our whatsapp Group

ಗಾಂಧಿನಗರ: ಪಾಕಿಸ್ತಾನ ಮೂಲದ ನಿಷೇಧಿತ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ (JeM) ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಐವರು ಶಂಕಿತ ಉಗ್ರರನ್ನು ಗುಜರಾತ್ ಉಗ್ರ ನಿಗ್ರಹ ದಳ (ಎಟಿಎಸ್) ಬಂಧಿಸಿದೆ.

ಗುಜರಾತ್‌ನ ವಿವಿಧ ಜಿಲ್ಲೆಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಬಂಧಿತರಲ್ಲಿ ಓರ್ವ ಟೈಮ್ ಬಾಂಬ್ ತಯಾರಿಸುವ ಸಿದ್ಧತೆಯಲ್ಲಿ ತೊಡಗಿದ್ದ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರನ್ನು ಬಿಲಾಲ್ ಅಬಿದ್ ಶೇರಾ, ಮೊಹಮ್ಮದ್ ಆಯೂಬ್ ಖಾಡಿವಾಲ್, ಮೊಹಮ್ಮದ್ ಶಾಪಿ ಮುಖಿ, ಮೊಹಮ್ಮದ್ ಹಸನ್ ಕರಾಡಿಯಾ ಹಾಗೂ ಮೊಹಮ್ಮದ್ ಆಯೂಬ್ ಸುನಾಸರಾ ಎಂದು ಗುರುತಿಸಲಾಗಿದೆ.

ಎಟಿಎಸ್ ಅಧಿಕಾರಿಗಳ ಪ್ರಕಾರ, ಬಂಧಿತರು ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದು, ಸ್ಫೋಟಕ ಸಾಧನಗಳ ಪರೀಕ್ಷೆ ಹಾಗೂ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು. ಸಾಮಾಜಿಕ ಜಾಲತಾಣಗಳ ಮೂಲಕ ಯುವಕರನ್ನು ಸಂಪರ್ಕಿಸಿ ಉಗ್ರ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಿದ್ದರು ಎನ್ನಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ತಿಂಗಳ ಆರಂಭದಲ್ಲಿ ಎಟಿಎಸ್ ಎಂಟು ಮಂದಿಯನ್ನು ಬಂಧಿಸಿತ್ತು. ಆ ಆರೋಪಿಗಳ ವಿಚಾರಣೆ ವೇಳೆ ಲಭ್ಯವಾದ ಮಾಹಿತಿಯ ಆಧಾರದ ಮೇಲೆ ಇದೀಗ ಮತ್ತಷ್ಟು ಶಂಕಿತರನ್ನು ಬಂಧಿಸಲಾಗಿದೆ.

ತನಿಖೆಯಲ್ಲಿ ಬಂಧಿತರಿಗೆ ಪಾಕಿಸ್ತಾನದಲ್ಲಿರುವ ಹ್ಯಾಂಡ್ಲರ್‌ಗಳಿಂದ ಹಣಕಾಸಿನ ನೆರವು ದೊರೆಯುತ್ತಿತ್ತು ಎಂಬ ಮಾಹಿತಿ ಹೊರಬಂದಿದೆ. ಅಲ್ಲದೆ, ಸೆಕೆಂಡ್ ಹ್ಯಾಂಡ್ ಕಾರು ಖರೀದಿಸುವಂತೆ ಹ್ಯಾಂಡ್ಲರ್‌ಗಳು ಸೂಚನೆ ನೀಡಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

ಬಂಧಿತರಲ್ಲಿ ಒಬ್ಬನಿಗೆ ಸ್ಫೋಟಕ ತಯಾರಿಕೆ ಬಗ್ಗೆ ಹೆಚ್ಚಿನ ಜ್ಞಾನವಿದ್ದು, ಕಾರ್ಯನಿರ್ವಹಿಸುವ ಟೈಮ್ ಬಾಂಬ್ ನಿರ್ಮಾಣದ ಅಂತಿಮ ಹಂತದಲ್ಲಿದ್ದ ಎನ್ನಲಾಗಿದೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಎಟಿಎಸ್ ತಂಡ, ಬಾಂಬ್ ತಯಾರಿ ಪೂರ್ಣಗೊಳ್ಳುವ ಮುನ್ನವೇ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಸ್ಥಳೀಯ ಸರ್ಕಾರಿ ಅಭಿಯೋಜಕರು ನ್ಯಾಯಾಲಯಕ್ಕೆ ಮಾಹಿತಿ ನೀಡುವ ವೇಳೆ, ಈ ಗುಂಪು ಈ ಹಿಂದೆ ಕಚ್ಚಾ ಟೈಮ್ ಬಾಂಬ್ ಪರೀಕ್ಷೆಗೆ ಯತ್ನಿಸಿತ್ತು. ಆದರೆ, ಆ ಪ್ರಯತ್ನ ವಿಫಲವಾಗಿತ್ತು ಎಂದು ತಿಳಿಸಿದ್ದಾರೆ.

ಪ್ರಕರಣದ ಹೆಚ್ಚಿನ ತನಿಖೆಗಾಗಿ ನ್ಯಾಯಾಲಯ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಕೇಂದ್ರ ಹಾಗೂ ರಾಜ್ಯ ಗುಪ್ತಚರ ಸಂಸ್ಥೆಗಳು ಉಗ್ರ ಜಾಲದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿವೆ.

ಸದ್ಯ ಎಟಿಎಸ್ ಅಧಿಕಾರಿಗಳು ಬಾಂಬ್ ತಯಾರಿಕೆ ಸಾಮಗ್ರಿಗಳು, ತಾಂತ್ರಿಕ ದಾಖಲೆಗಳು ಹಾಗೂ ಉರ್ದು ಭಾಷೆಯಲ್ಲಿರುವ ಜೈಶ್-ಎ-ಮೊಹಮ್ಮದ್ ಸಂಘಟನೆಯ ತೀವ್ರಗಾಮಿ ಸಾಹಿತ್ಯ ಸೇರಿದಂತೆ ಹಲವು ಸಾಕ್ಷ್ಯಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img