ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಕಳೆದ ಮೂರು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಉಸಿರಾಟದ ತೊಂದರೆ ತೀವ್ರಗೊಂಡ ಹಿನ್ನೆಲೆಯಲ್ಲಿ ಚೆನ್ನಮ್ಮ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯರ ತಂಡದ ನಿಗಾದಲ್ಲಿ ಚಿಕಿತ್ಸೆ ಮುಂದುವರಿದಿದ್ದರೂ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ. ಕುಟುಂಬಸ್ಥರು, ಆಪ್ತರು ಹಾಗೂ ವಿವಿಧ ರಾಜಕೀಯ ನಾಯಕರು ಸಂತಾಪ ಸೂಚಿಸುತ್ತಿದ್ದಾರೆ.



