HomeWorld Newsಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ದಂಪತಿಗೆ ಗಂಡು ಮಗು ಜನನ; ಅಪರೂಪದ ರಾಜಕೀಯ ದಾಖಲೆಗೆ ಸಾಕ್ಷಿಯಾದ...

ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ದಂಪತಿಗೆ ಗಂಡು ಮಗು ಜನನ; ಅಪರೂಪದ ರಾಜಕೀಯ ದಾಖಲೆಗೆ ಸಾಕ್ಷಿಯಾದ ಕುಟುಂಬ

For Dai;y Updates Join Our whatsapp Group

ವಾಷಿಂಗ್ಟನ್: ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಹಾಗೂ ಅವರ ಪತ್ನಿ, ಅಮೆರಿಕದ ಎರಡನೇ ಮಹಿಳೆ ಉಷಾ ವ್ಯಾನ್ಸ್ ದಂಪತಿಗೆ ನಾಲ್ಕನೇ ಮಗು ಜನಿಸಿದೆ. ಗಂಡು ಮಗುವಿಗೆ ‘ಅಲೆಕ್ ನೀಲ್ ವ್ಯಾನ್ಸ್’ ಎಂದು ಹೆಸರಿಡಲಾಗಿದ್ದು, ಈ ಸಂತಸದ ಸುದ್ದಿಯನ್ನು ಕುಟುಂಬ ಅಧಿಕೃತವಾಗಿ ಹಂಚಿಕೊಂಡಿದೆ.

ಭಾನುವಾರ ಬೆಳಿಗ್ಗೆ ಮೇರಿಲ್ಯಾಂಡ್‌ನ ವಾಲ್ಟರ್ ರೀಡ್ ರಾಷ್ಟ್ರೀಯ ಮಿಲಿಟರಿ ವೈದ್ಯಕೀಯ ಕೇಂದ್ರದಲ್ಲಿ ಉಷಾ ವ್ಯಾನ್ಸ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ವೈದ್ಯಕೀಯ ಸೇವೆ ನೀಡಿದ ಆಸ್ಪತ್ರೆಯ ವೈದ್ಯರು ಹಾಗೂ ಶ್ವೇತಭವನದ ವೈದ್ಯಕೀಯ ತಂಡಕ್ಕೆ ಜೆ.ಡಿ. ವ್ಯಾನ್ಸ್ ಮತ್ತು ಉಷಾ ವ್ಯಾನ್ಸ್ ಕೃತಜ್ಞತೆ ಸಲ್ಲಿಸಿದ್ದಾರೆ. ವೈದ್ಯರು ಮತ್ತು ಸಿಬ್ಬಂದಿಯ ಸೇವೆಯನ್ನು ಅವರು ವಿಶೇಷವಾಗಿ ಪ್ರಶಂಸಿಸಿದ್ದಾರೆ.

ಅಲೆಕ್ ನೀಲ್ ವ್ಯಾನ್ಸ್ ದಂಪತಿಯ ನಾಲ್ಕನೇ ಮಗುವಾಗಿದೆ. ಈಗಾಗಲೇ ಅವರಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಒಬ್ಬ ಪುತ್ರಿ ಇದ್ದಾರೆ. ತಮ್ಮ ಮಕ್ಕಳ ಖಾಸಗಿತನವನ್ನು ಕಾಪಾಡುವ ಉದ್ದೇಶದಿಂದ ಕುಟುಂಬವು ಅವರನ್ನು ಸಾರ್ವಜನಿಕ ಜೀವನದಿಂದ ದೂರವಿಡಲು ಹೆಚ್ಚಿನ ಆದ್ಯತೆ ನೀಡುತ್ತಿದೆ.

ಈ ಜನನ ಅಮೆರಿಕದ ರಾಜಕೀಯ ಇತಿಹಾಸದಲ್ಲೂ ವಿಶೇಷ ಮಹತ್ವ ಪಡೆದಿದೆ. ಸುಮಾರು 150 ವರ್ಷಗಳ ಬಳಿಕ ಅಧಿಕಾರದಲ್ಲಿರುವ ಅಮೆರಿಕದ ಉಪಾಧ್ಯಕ್ಷರೊಬ್ಬರಿಗೆ ಮಗು ಜನಿಸಿರುವ ಅಪರೂಪದ ಘಟನೆ ಇದಾಗಿದೆ. ಇದಕ್ಕೂ ಮೊದಲು 1870ರಲ್ಲಿ ಆಗಿನ ಉಪಾಧ್ಯಕ್ಷ ಶುಯ್ಲರ್ ಕೋಲ್ಫ್ಯಾಕ್ಸ್ ಅಧಿಕಾರದಲ್ಲಿದ್ದಾಗ ತಂದೆಯಾಗಿದ್ದರು.

41 ವರ್ಷದ ಜೆ.ಡಿ. ವ್ಯಾನ್ಸ್ ಅಮೆರಿಕದ ಕಿರಿಯ ಉಪಾಧ್ಯಕ್ಷರಲ್ಲಿ ಒಬ್ಬರಾಗಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಅವರ ಪತ್ನಿ ಉಷಾ ವ್ಯಾನ್ಸ್ ಭಾರತೀಯ ಮೂಲದವರಾಗಿದ್ದು, ಅವರ ಕುಟುಂಬ ಮೂಲತಃ ಆಂಧ್ರಪ್ರದೇಶಕ್ಕೆ ಸೇರಿದದ್ದಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img