HomeKarnataka Newsರಾಜ್ಯದ 178 ತಾಲೂಕುಗಳಲ್ಲಿ ಮಳೆ ಕೊರತೆ; ಕುಡಿಯುವ ನೀರಿಗೆ ಮೊದಲ ಆದ್ಯತೆ, ಗ್ರಾಮದಲ್ಲೇ ಉದ್ಯೋಗ ಸೃಷ್ಟಿಗೆ...

ರಾಜ್ಯದ 178 ತಾಲೂಕುಗಳಲ್ಲಿ ಮಳೆ ಕೊರತೆ; ಕುಡಿಯುವ ನೀರಿಗೆ ಮೊದಲ ಆದ್ಯತೆ, ಗ್ರಾಮದಲ್ಲೇ ಉದ್ಯೋಗ ಸೃಷ್ಟಿಗೆ ಸೂಚನೆ – ಸಚಿವ ಈಶ್ವರ್ ಖಂಡ್ರೆ

For Dai;y Updates Join Our whatsapp Group

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ 178 ತಾಲೂಕುಗಳಲ್ಲಿ ಮಳೆಯ ಕೊರತೆ ದಾಖಲಾಗಿದ್ದು, ಅವುಗಳಲ್ಲಿ 60 ತಾಲೂಕುಗಳು ತೀವ್ರ ಮಳೆ ಅಭಾವವನ್ನು ಎದುರಿಸುತ್ತಿವೆ.

ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡುವುದರ ಜೊತೆಗೆ ಗ್ರಾಮೀಣ ಪ್ರದೇಶದ ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಕಲ್ಪಿಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಈಗಾಗಲೇ 117 ಕೋಟಿ ರೂಪಾಯಿಗಳನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ. ಜೊತೆಗೆ 95 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಇನ್ನೂ 25 ಕೋಟಿ ರೂಪಾಯಿ ವಿವಿಧ ಜಿಲ್ಲೆಗಳಲ್ಲಿ ಲಭ್ಯವಿದೆ ಎಂದು ಮಾಹಿತಿ ನೀಡಿದರು.

ಯಾವುದೇ ಗ್ರಾಮ ಅಥವಾ ತಾಂಡಾದಲ್ಲಿ ಕುಡಿಯುವ ನೀರಿನ ಕೊಳವೆಬಾವಿಗಳು ಬತ್ತಿದರೆ, ಖಾಸಗಿ ಬೋರ್‌ವೆಲ್ ಅಥವಾ ಬಾವಿಗಳನ್ನು ಬಾಡಿಗೆಗೆ ಪಡೆದು ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು. ತೀರಾ ಅನಿವಾರ್ಯ ಪರಿಸ್ಥಿತಿಯಲ್ಲಿ ಹೊಸ ಕೊಳವೆಬಾವಿ ಕೊರೆಯಲು ಸಹ ಅನುಮತಿ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಮುಂದಿನ ಮೂರುರಿಂದ ನಾಲ್ಕು ತಿಂಗಳುಗಳವರೆಗೆ ಸಮರ್ಪಕ ಮಳೆಯಾಗದಿದ್ದರೂ ಮುಂದಿನ ಮುಂಗಾರು ಆರಂಭವಾಗುವವರೆಗೆ ನೀರಿನ ಕೊರತೆ ಉಂಟಾಗದಂತೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಈಗಾಗಲೇ ಅಧ್ಯಯನ ಹಾಗೂ ಪೂರ್ವಸಿದ್ಧತೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

ರೈತರಿಗೆ ಬೆಳೆ ವಿಮೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ ಸಚಿವರು, ಬ್ಯಾಂಕ್ ಸಾಲ ಬಾಕಿ ಇರುವ ರೈತರು ಹಾಗೂ ಸಾಲವನ್ನು ಒಮ್ಮೆ ಇತ್ಯರ್ಥಪಡಿಸಿರುವ ರೈತರೂ ಸಹ ಸಮುದಾಯ ಸೇವಾ ಕೇಂದ್ರಗಳ ಮೂಲಕ ಬೆಳೆ ವಿಮೆ ಕಂತು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರ ಅನುದಾನದ ಅನುಪಾತವನ್ನು 90:10ರಿಂದ 60:40ಕ್ಕೆ ಬದಲಾಯಿಸಿರುವುದರಿಂದ ರಾಜ್ಯದ ಮೇಲಿನ ಆರ್ಥಿಕ ಹೊರೆ ಹೆಚ್ಚಾದರೂ, ಬಡವರು,

ಗ್ರಾಮೀಣರು, ದಲಿತರು ಹಾಗೂ ವಂಚಿತ ವರ್ಗದ ಜನರ ಹಿತದೃಷ್ಟಿಯಿಂದ ಜುಲೈ 1ರಿಂದ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದೆ. ಇದುವರೆಗೆ ಸುಮಾರು 5 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಿದ್ದು, ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಕೇಳಿ ಬಂದ ಪ್ರತಿಯೊಬ್ಬರಿಗೂ ಕೆಲಸ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಇದಲ್ಲದೆ, ವಿಬಿಜಿ ರಾಮ್‌ಜಿ ಯೋಜನೆಯಡಿ 318 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವಕಾಶವಿದ್ದು, ಹೆಚ್ಚುವರಿ ಕ್ರಿಯಾ ಯೋಜನೆ ಸಲ್ಲಿಸಲು ಪೋರ್ಟಲ್ ತೆರೆದಿದೆ. ಶಾಲಾ ಕೊಠಡಿಗಳು, ಆರೋಗ್ಯ ಕೇಂದ್ರಗಳು, ಸರ್ಕಾರಿ ಕಟ್ಟಡಗಳ ದುರಸ್ತಿ, ಕೃಷಿ ಹೊಂಡ ನಿರ್ಮಾಣ, ವಿತರಣಾ ಕಾಲುವೆ, ಹನಿ ನೀರಾವರಿ ಹಾಗೂ ಕಿರು ಅರಣ್ಯ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಈ ಯೋಜನೆಗಳ ಸದುಪಯೋಗವನ್ನು ಗ್ರಾಮೀಣ ಜನರು ಪಡೆದುಕೊಳ್ಳಬೇಕು ಎಂದು ಸಚಿವ ಈಶ್ವರ್ ಬಿ. ಖಂಡ್ರೆ ಮನವಿ ಮಾಡಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img