ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಲು ಪತ್ನಿ ವಿಜಯಲಕ್ಷ್ಮಿ ಹಾಗೂ ನಟಿ ರಕ್ಷಿತಾ ಆಗಮಿಸಿದರು. ಇಬ್ಬರೂ ಪ್ರತ್ಯೇಕವಾಗಿ ಜೈಲಿಗೆ ಪ್ರವೇಶಿಸಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ದರ್ಶನ್ ಅವರೊಂದಿಗೆ ಚರ್ಚೆ ನಡೆಸಿದರು.
ಜೈಲಿನಲ್ಲಿರುವ ದರ್ಶನ್ ಅವರ ಸ್ಥಿತಿಯನ್ನು ಕಂಡು ರಕ್ಷಿತಾ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ಆಪ್ತ ಸ್ನೇಹಿತನ ಸಂಕಷ್ಟದಿಂದ ಮನನೊಂದ ಅವರು, ಭೇಟಿ ಮುಗಿಸಿ ಹೊರಬರುವಾಗಲೂ ಯಾವುದೇ ಪ್ರತಿಕ್ರಿಯೆ ನೀಡಲು ಮುಂದಾಗಲಿಲ್ಲ.
ಮಾಧ್ಯಮಗಳು ಪ್ರಶ್ನಿಸಿದಾಗ “ದರ್ಶನ್ ಚೆನ್ನಾಗಿದ್ದಾರೆ” ಎಂದು ಮಾತ್ರ ಹೇಳಿದ ರಕ್ಷಿತಾ, ವಿಜಯಲಕ್ಷ್ಮಿಯೊಂದಿಗೆ ಅಲ್ಲಿಂದ ತೆರಳಿದರು.
ಇನ್ನೊಂದೆಡೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಆವರೆಗೆ ದರ್ಶನ್‌ಗೆ ಜಾಮೀನು ಸಿಗದ ಹಿನ್ನೆಲೆಯಲ್ಲಿ ಅವರು ಮುಂದಿನ ವರ್ಷ ಮೇ 15ರವರೆಗೆ ಜೈಲಿನಲ್ಲೇ ಉಳಿಯಬೇಕಾಗಿದೆ.



