ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ ಹಾಗೂ ಸಿಸಿಬಿ ಎಸಿಪಿಯಾಗಿರುವ ಎಲ್.ವೈ. ರಾಜೇಶ್ ಅವರಿಗೆ ಅತ್ಯುತ್ತಮ ಸೇವೆಗಾಗಿ ಪ್ರತಿಷ್ಠಿತ ಡಿಜಿ ಪದಕ ಪ್ರದಾನ ಮಾಡಲಾಗಿದೆ.
ಡ್ರಗ್ಸ್ ಮುಕ್ತ ಬೆಂಗಳೂರಿನ ನಿರ್ಮಾಣಕ್ಕೆ ನೀಡಿದ ಕೊಡುಗೆ, ಸಮಾಜಮುಖಿ ಕಾರ್ಯಗಳು ಹಾಗೂ ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ.
ನಟ ಜಯಸೂರ್ಯ ಅವರ ತಂದೆಯಾಗಿರುವ ಎಲ್.ವೈ. ರಾಜೇಶ್, ಪೊಲೀಸ್ ಸೇವೆಯ ಜೊತೆಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ವಿಶೇಷ ಶಿಬಿರಗಳನ್ನು ಆಯೋಜಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿಯೂ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದಾರೆ.



