HomeEntertainmentನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ಜ್ಯೋತಿಕಾ ಆಗ್ರಹ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ಜ್ಯೋತಿಕಾ ಆಗ್ರಹ

For Dai;y Updates Join Our whatsapp Group

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಖ್ಯಾತ ತಮಿಳು ನಟಿ ಜ್ಯೋತಿಕಾ ಆಗ್ರಹಿಸಿದ್ದಾರೆ. ಈ ಕುರಿತು ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ತಮ್ಮ ಪೋಸ್ಟ್‌ನಲ್ಲಿ ಜ್ಯೋತಿಕಾ, “ಧರ್ಮೇಂದ್ರ ಪ್ರಧಾನ್ ಅವರೇ, ಹುದ್ದೆಯಿಂದ ಕೆಳಗಿಳಿಯಿರಿ. ರಾಜೀನಾಮೆ ನೀಡಿ” ಎಂದು ನೇರವಾಗಿ ಒತ್ತಾಯಿಸಿದ್ದಾರೆ.

ಇದೇ ವೇಳೆ, “ನಾನು ವಿದ್ಯಾರ್ಥಿಗಳ ಪರವಾಗಿದ್ದೇನೆ. ನಮ್ಮ ದೇಶದ ಭವಿಷ್ಯದ ಪರವಾಗಿದ್ದೇನೆ. ನಾನು ಹೊಣೆಗಾರಿಕೆಯ ಪರವಾಗಿದ್ದೇನೆ. ನಾನು ಪ್ರಜಾಪ್ರಭುತ್ವ ಭಾರತದ ಪರವಾಗಿದ್ದೇನೆ. ಉತ್ತಮ ಶಿಕ್ಷಣ ವ್ಯವಸ್ಥೆಯ ಪರವಾಗಿದ್ದೇನೆ” ಎಂದು ಅವರು ಬರೆದುಕೊಂಡಿದ್ದಾರೆ.

ನೀಟ್ ಪ್ರಕರಣದ ವಿರುದ್ಧ ಹೋರಾಟ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಹಾಗೂ ವಿದ್ಯಾರ್ಥಿ ಹೋರಾಟಗಾರರಾದ ಅಭಿಜೀತ್ ದೀಪ್ಕೆ ಮತ್ತು ಸೌರವ್ ದಾಸ್ ಅವರ ಧೈರ್ಯವನ್ನು ಜ್ಯೋತಿಕಾ ಪ್ರಶಂಸಿಸಿದ್ದಾರೆ.

“ತಾಯಂದಿರಾಗಿ ನಮ್ಮ ಮಕ್ಕಳನ್ನು ನಿಮ್ಮಂತೆಯೇ ಬೆಳೆಸಲು ನಾವು ಬಯಸುತ್ತೇವೆ. ಯಾವುದೇ ಮುಚ್ಚುಮರೆಯಿಲ್ಲದೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ‘ಜೆನ್ Z’ ಪೀಳಿಗೆಯ ಬಗ್ಗೆ ನಮಗೆ ಹೆಮ್ಮೆ ಇದೆ. ಎಲ್ಲರೂ ಒಗ್ಗೂಡಿ ‘ನಾವೇ ಭಾರತ’ ಎಂಬುದನ್ನು ನೀವು ಸಾಬೀತುಪಡಿಸಿದ್ದೀರಿ” ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಹೋರಾಟಗಾರರು ಒತ್ತಡದ ವಾತಾವರಣವನ್ನು ಮುರಿದು ಜನರಲ್ಲಿ ನಿರ್ಭೀತಿಯನ್ನು ಮೂಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿರುವ ಜ್ಯೋತಿಕಾ, “ಒತ್ತಡದ ವಾತಾವರಣವನ್ನು ಮುರಿದು ನಮ್ಮನ್ನು ನಿರ್ಭೀತರನ್ನಾಗಿಸಿದ್ದಕ್ಕಾಗಿ ಧನ್ಯವಾದಗಳು” ಎಂದು ಬರೆದಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img