Homekoppalಸಾಮರಸ್ಯ ಕೆಡಿಸೋದೇ ಬಿಜೆಪಿ ಕೆಲಸ: ತಂಗಡಗಿ

ಸಾಮರಸ್ಯ ಕೆಡಿಸೋದೇ ಬಿಜೆಪಿ ಕೆಲಸ: ತಂಗಡಗಿ

Spread the love

ವಿಜಯಸಾಕ್ಷಿ ಸುದ್ದಿ,
ಕೊಪ್ಪಳ: ಬಿಜೆಪಿಯವರು ಮಾಡಿದ ಒಂದಾದರೂ ಉತ್ತಮ ಕೆಲಸ ಇದೆಯಾ? ರಾಜ್ಯದಲ್ಲಿ ಸಾಮರಸ್ಯ ಕೆಡಿಸೋದು, ಜಾತಿಗಳ ನಡುವೆ ಜಗಳ ಹಚ್ಚೋದೇ ಬಿಜೆಪಿ ಕೆಲಸ ಎಂದು ಮಾಜಿ ಸಚಿವ, ಕಾಂಗ್ರೆಸ್ ಕೊಪ್ಪಳ ಜಿಲ್ಲಾಧ್ಯಕ್ಷ ಶಿವರಾಜ‌ ತಂಗಡಗಿ ಕಿಡಿ‌ಕಾರಿದರು.

ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಹಿಂದು ದೇವಸ್ಥಾನದ ಬಳಿ ಮುಸ್ಲಿಂ ವ್ಯಾಪಾರಸ್ಥರಿಗೆ ನಿಷೇಧ ಹೇರಿರುವುದು ಸಮಂಜಸವಲ್ಲ, ಇಷ್ಟು ದಿನ ಇರದ ಕಾನೂನು, ಕ್ರಮ ಈಗೇಕೆ ಎಂದು ಅವರು ಪ್ರಶ್ನಿಸಿದರು.

ಬಿಜೆಪಿ ಅವರಿಗೆ ಅಭಿವೃದ್ಧಿ ಬಗ್ಗೆ‌ ಕಿಂಚಿತ್ತೂ ಕಾಳಜಿ ಇಲ್ಲ. ಇಂಥ ಕಾರ್ಯಗಳ ಮೂಲಕ ಜನರನ್ನು ಒಡೆದು ಆಳುವ ನೀತಿಗೆ ಕೈ ಹಾಕಿರುವ ಬಿಜೆಪಿ, ಮುಂಬರುವ ಚುನಾವಣೆಯಲ್ಲಿ ತಕ್ಕ ಶಾಸ್ತಿ ಅನುಭವಿಸುತ್ತದೆ ಎಂದು ಟೀಕಿಸಿದರು.

ಕರ್ನಾಟಕದ ಹೆಮ್ಮೆಯ ನಟ ಡಾ.ಪುನೀತ್ ರಾಜ್‌ಕುಮಾರ್ ಅವರ ಕೊನೆಯ ಸಿನಿಮಾ ಜೇಮ್ಸ್ ಅತ್ಯುತ್ತಮವಾಗಿ ಪ್ರದರ್ಶನ ಕಾಣುತ್ತಿದ್ದರೂ ಥೇಟರ್‌ಗಳಲ್ಲಿ ಜೇಮ್ಸ್ ಸಿನಿಮಾ ತೆಗೆದು ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ಪ್ರದರ್ಶನಕ್ಕೆ ಸಿಎಂ ಸೇರಿದಂತೆ ಬಿಜೆಪಿಯವರು ಅತ್ಯುತ್ಸಾಹ ತೋರುತ್ತಿದ್ದಾರೆ. ಇದು ದಿವಂಗತ ನಟ ಡಾ.ಪುನೀತ್‌ಗೆ ಮಾಡುವ ಅವಮಾನ. ಈಗಾಗಲೇ ರಾಜ್ಯಾದ್ಯಂತ ಪುನೀತ್ ಅಭಿಮಾನಿಗಳು ಸರಕಾರದ ವಿರುದ್ಧ ಬಂಡೆದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಪಾಠ ಕಲಿಸಲು ಜನ ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸದಸ್ಯತ್ವ ನೋಂದಣಿಯಲ್ಲಿ ರಾಜ್ಯಕ್ಕೆ ಪ್ರಥಮ:
ಕಾಂಗ್ರೆಸ್ ಸದಸ್ಯತ್ವ ನೋಂದಣಿಯಲ್ಲಿ ಕೊಪ್ಪಳ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿರುವುದು ಹೆಮ್ಮೆಯ ಸಂಗತಿ ಎಂದು ತಂಗಡಗಿ ತಿಳಿಸಿದರು.

ಮಾರ್ಚ್ 22ರ ರಾತ್ರಿಯವರೆಗೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ 22,462, ಕನಕಗಿರಿ ತಾಲೂಕಿನಲ್ಲಿ 49,118, ಗಂಗಾವತಿ ತಾಲ್ಲೂಕಿನಲ್ಲಿ 61,544, ಕೊಪ್ಪಳ ತಾಲೂಕಿನಲ್ಲಿ 19,703 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 20,932 ಸದಸ್ಯತ್ವ ನೋಂದಣಿಯಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ 1,73,459 ಜನ ಕಾಂಗ್ರೆಸ್ ಸದಸ್ಯತ್ವ ಪಡೆದಿದ್ದಾರೆ ಎಂದು ತಿಳಿಸಿದರು.

ಮಾರ್ಚ್ 24ರಂದು ಕೆಪಿಸಿಸಿ ಅಧ್ಯಕ್ಷ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳ ಕಾಂಗ್ರೆಸ್ ಸದಸ್ಯತ್ವ ನೋಂದಣಿಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಮಾರ್ಚ್ 24ರ ಮಧ್ಯಾಹ್ನ 3 ಗಂಟೆಗೆ ಕೊಪ್ಪಳದ ಶ್ರೀ ಶಿವಶಾಂತ ಮಂಗಲ ಭವನದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ಪಕ್ಷದ ವರಿಷ್ಠರು, ಮುಖಂಡರು ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು ಎಂದು ಅವರು ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ, ವಕ್ತಾರ ರವಿ ಕುರಗೋಡ, ಜಿಪಂ ಮಾಜಿ ಸದಸ್ಯ ಯಂಕಣ್ಣ ಯರಾಶಿ, ಹನುಮಂತಗೌಡ ಚಂಡೂರು ಇತರರು ಇದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!