ನವದೆಹಲಿ: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಶುಕ್ರವಾರ ಒಂದೇ ದಿನ ₹270 ಕುಸಿದಿದ್ದ ಚಿನ್ನದ ದರ, ವಾರಾಂತ್ಯದಲ್ಲಿ ಮತ್ತೆ ಏರಿಕೆಯ ಹಾದಿಗೆ ಮರಳಿದೆ.
ಇಂದು ಚಿನ್ನದ ಬೆಲೆಯಲ್ಲಿ ಪ್ರತಿ ಗ್ರಾಂಗೆ ₹55 ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡುಬಂದಿದ್ದು, ಪ್ರತಿ 100 ಗ್ರಾಂಗೆ ₹5 ಹೆಚ್ಚಾಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,32,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,44,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,32,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 24,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,493 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,285 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,870 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,493 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,285 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ.



