HomePolitics Newsಕೆ.ಎಸ್. ಈಶ್ವರಪ್ಪ ವಿರುದ್ಧ ಗೆದ್ದಿದ್ದ ಮಾಜಿ ಶಾಸಕ ಚಂದ್ರಶೇಖರಪ್ಪ ವಿಧಿವಶ!

ಕೆ.ಎಸ್. ಈಶ್ವರಪ್ಪ ವಿರುದ್ಧ ಗೆದ್ದಿದ್ದ ಮಾಜಿ ಶಾಸಕ ಚಂದ್ರಶೇಖರಪ್ಪ ವಿಧಿವಶ!

For Dai;y Updates Join Our whatsapp Group

ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ.

ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಸಂಜೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಮಾಜಿ ಶಾಸಕರ ಪಾರ್ಥಿವ ಶರೀರ ಸದ್ಯ ಆಸ್ಪತ್ರೆಯಲ್ಲಿದ್ದು, ರಾತ್ರಿ ವೇಳೆಗೆ ಕುಟುಂಬಸ್ಥರು ಶಿವಮೊಗ್ಗಕ್ಕೆ ತರಲಿದ್ದಾರೆ. ನಾಳೆ ಸಂಜೆ ವೇಳೆಗೆ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆ ಇದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಹೆಚ್.ಎಂ. ಚಂದ್ರಶೇಖರಪ್ಪ ಅವರು 1999ರಿಂದ 2004ರ ಅವಧಿಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾಗಿ ಕಾರ್ಯನಿರ್ವಹಿಸಿದ್ದರು. ಚುನಾವಣೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡರಾಗಿದ್ದ ಅವರು, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೆ ಮಾಜಿ ಶಾಸಕರ ವೇದಿಕೆಯ ರಾಜ್ಯ ಅಧ್ಯಕ್ಷರಾಗಿ ಹಾಗೂ ವೀರಶೈವ-ಲಿಂಗಾಯತ ಮಹಾಸಭಾದ ಮಾಜಿ ರಾಜ್ಯ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಚಂದ್ರಶೇಖರಪ್ಪ ಅವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಹಿರಿಯ ರಾಜಕೀಯ ನಾಯಕರ ಅಗಲಿಕೆಯಿಂದ ಕಾಂಗ್ರೆಸ್ ವಲಯದಲ್ಲಿ ಶೋಕ ಆವರಿಸಿದೆ.

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img