HomeBengaluru Newsಕರ್ನಾಟಕದಲ್ಲಿ ಮಳೆ ಅಬ್ಬರ: ಈ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಮಳೆ ಅಬ್ಬರ: ಈ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ!

For Dai;y Updates Join Our whatsapp Group

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ ಅಂತ್ಯದವರೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿವೆ.

ಕರಾವಳಿ ಕರ್ನಾಟಕದಲ್ಲಿ ಜುಲೈ 30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 28ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲೂ ಇನ್ನೂ ಕೆಲವು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಜುಲೈ 28ರಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಅದರೊಂದಿಗೆ ಮಳೆಯಾಗಲಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರು ದಕ್ಷಿಣದ ಚುಂಚನಕುಪ್ಪೆಯಲ್ಲಿ 78 ಮಿ.ಮೀ., ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ 66.5 ಮಿ.ಮೀ., ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆಗುಂಬೆಯಲ್ಲಿ 66.4 ಮಿ.ಮೀ., ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನೆರಿಯದಲ್ಲಿ 65 ಮಿ.ಮೀ. ಮಳೆಯಾಗಿದೆ. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯ ಪುಣಭಘಟ್ಟದಲ್ಲಿ 58 ಮಿ.ಮೀ., ಕೊಡಗು ಜಿಲ್ಲೆಯ ವಿರಾಜಪೇಟೆಯ ಬಿರುನಾನಿಯಲ್ಲಿ 48 ಮಿ.ಮೀ. ಹಾಗೂ ಶೃಂಗೇರಿಯ ಬೇಗಾರಿನಲ್ಲಿ 47 ಮಿ.ಮೀ. ಮಳೆ ದಾಖಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img