HomeIndia Newsವಾಹನ ಖರೀದಿ ದುಬಾರಿ, ಪ್ರಯಾಣವೂ ದುಬಾರಿ: ಆಗಸ್ಟ್ 1ರಿಂದ ಹೊಸ ವಾಹನಗಳ ಬೆಲೆ ಏರಿಕೆ! ಟ್ರಾವೆಲ್ಸ್...

ವಾಹನ ಖರೀದಿ ದುಬಾರಿ, ಪ್ರಯಾಣವೂ ದುಬಾರಿ: ಆಗಸ್ಟ್ 1ರಿಂದ ಹೊಸ ವಾಹನಗಳ ಬೆಲೆ ಏರಿಕೆ! ಟ್ರಾವೆಲ್ಸ್ ಬಾಡಿಗೆ ಹೆಚ್ಚಳಕ್ಕೆ ಸಿದ್ಧತೆ

For Dai;y Updates Join Our whatsapp Group

ನವದೆಹಲಿ: ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿರುವ ನಡುವೆಯೇ, ಆಗಸ್ಟ್‌ 1ರಿಂದ ಹೊಸ ವಾಹನಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಟ್ರಾವೆಲ್ಸ್ ಮಾಲೀಕರ ಸಂಘಗಳೂ ಪ್ರಯಾಣ ದರ ಹೆಚ್ಚಳಕ್ಕೆ ಮುಂದಾಗಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ಜಾಗತಿಕ ಮಟ್ಟದಲ್ಲಿ ಯುದ್ಧ ಪರಿಸ್ಥಿತಿ, ಹಣದುಬ್ಬರ ಹಾಗೂ ಕಚ್ಚಾ ವಸ್ತುಗಳ ಬೆಲೆ ಏರಿಕೆಯ ಪರಿಣಾಮ ವಾಹನ ತಯಾರಿಕಾ ವೆಚ್ಚ ಹೆಚ್ಚಾಗಿದೆ. ಉಕ್ಕು, ಅಲ್ಯೂಮಿನಿಯಂ, ರಬ್ಬರ್, ಪ್ಲಾಸ್ಟಿಕ್, ಎಲೆಕ್ಟ್ರಾನಿಕ್ ಚಿಪ್‌ಗಳು, ಬ್ಯಾಟರಿಗಳು ಹಾಗೂ ವಿವಿಧ ಬಿಡಿಭಾಗಗಳ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಹಲವು ವಾಹನ ತಯಾರಕ ಕಂಪನಿಗಳು ವಾಹನಗಳ ಬೆಲೆ ಹೆಚ್ಚಿಸಲು ನಿರ್ಧರಿಸಿವೆ.

ಈ ದರ ಏರಿಕೆಯ ನೇರ ಹೊರೆ ಗ್ರಾಹಕರ ಮೇಲೆ ಬೀಳಲಿದ್ದು, ಹೊಸ ಕಾರು ಸೇರಿದಂತೆ ವಿವಿಧ ವಾಹನಗಳನ್ನು ಖರೀದಿಸುವುದು ಮತ್ತಷ್ಟು ದುಬಾರಿಯಾಗಲಿದೆ.

ವಾಹನಗಳ ಬೆಲೆ ಹೆಚ್ಚಳದಿಂದ ಟ್ರಾವೆಲ್ಸ್ ಉದ್ಯಮಕ್ಕೂ ಹೊಡೆತ ಬೀಳುವ ಸಾಧ್ಯತೆ ಇದೆ. ಕಾರು, ಟಿಟಿ ಹಾಗೂ ಇತರೆ ವಾಣಿಜ್ಯ ವಾಹನಗಳನ್ನು ಖರೀದಿಸುವ ವೆಚ್ಚ ಹೆಚ್ಚಾಗಲಿದ್ದು, ಈಗಾಗಲೇ ಪೆಟ್ರೋಲ್, ಡೀಸೆಲ್ ಮತ್ತು ಟೋಲ್ ದರ ಏರಿಕೆಯಿಂದ ಸಂಕಷ್ಟದಲ್ಲಿರುವ ಟ್ರಾವೆಲ್ಸ್ ಸಂಸ್ಥೆಗಳು ಪ್ರಯಾಣ ದರ ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸಿವೆ.

ಈ ಕುರಿತು ಕರ್ನಾಟಕ ಟ್ರಾವೆಲ್ಸ್ ಅಸೋಸಿಯೇಷನ್, ಪ್ರತಿ ಪ್ರಯಾಣದ ಮೇಲೂ ಬಾಡಿಗೆ ದರ ಹೆಚ್ಚಳ ಮಾಡುವ ಸಾಧ್ಯತೆ ಇರುವುದಾಗಿ ಮುನ್ಸೂಚನೆ ನೀಡಿದೆ.

ಈಗಾಗಲೇ ಕೆಲವು ಪ್ರಮುಖ ವಾಹನ ತಯಾರಕ ಕಂಪನಿಗಳು ಆಗಸ್ಟ್‌ 1ರಿಂದ ಜಾರಿಗೆ ಬರುವ ಹೊಸ ಬೆಲೆ ಪರಿಷ್ಕರಣೆಯ ಕುರಿತು ತಮ್ಮ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಮಾಹಿತಿ ಪ್ರಕಟಿಸಿವೆ. ವಾಹನ ದರ ಏರಿಕೆ ಮತ್ತು ಟ್ರಾವೆಲ್ಸ್ ಬಾಡಿಗೆ ಹೆಚ್ಚಳದಿಂದ ಸಾರ್ವಜನಿಕರ ಮೇಲಿನ ಆರ್ಥಿಕ ಹೊರೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img