HomeBengaluru Newsಜನಾರ್ದನ ರೆಡ್ಡಿಗೆ ಸಂಕಷ್ಟ: ಸಸಿಕಾಂತ್ ಸೆಂಥಿಲ್ ಮಾನನಷ್ಟ ಕೇಸ್‌ನಲ್ಲಿ ಕೋರ್ಟ್ ಸಮನ್ಸ್!

ಜನಾರ್ದನ ರೆಡ್ಡಿಗೆ ಸಂಕಷ್ಟ: ಸಸಿಕಾಂತ್ ಸೆಂಥಿಲ್ ಮಾನನಷ್ಟ ಕೇಸ್‌ನಲ್ಲಿ ಕೋರ್ಟ್ ಸಮನ್ಸ್!

For Dai;y Updates Join Our whatsapp Group

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದ ಸಂಸದ ಸಸಿಕಾಂತ್ ಸೆಂಥಿಲ್ ಅವರು ದಾಖಲಿಸಿದ್ದ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಪ್ರಕರಣದಲ್ಲಿ ಕಾಗ್ನಿಜೆನ್ಸ್ ಪಡೆದು ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಜನಾರ್ದನ ರೆಡ್ಡಿಗೆ ಸಮನ್ಸ್ ಜಾರಿ ಮಾಡಿದ್ದು, ಆಗಸ್ಟ್‌ 24ರಂದು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

ಧರ್ಮಸ್ಥಳ ಪ್ರಕರಣದ ಹಿಂದೆ ನಡೆದಿರುವ ಷಡ್ಯಂತ್ರದಲ್ಲಿ ಸಸಿಕಾಂತ್ ಸೆಂಥಿಲ್ ಅವರ ಕೈವಾಡವಿದೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದರು. ಅಲ್ಲದೇ, ಚಿನ್ನಯ್ಯನಿಗೆ ಆಶ್ರಯ ನೀಡುವುದು ಸೇರಿದಂತೆ ಹಲವು ವಿಚಾರಗಳಲ್ಲಿ ಸೆಂಥಿಲ್ ಅವರು ಷಡ್ಯಂತ್ರದ ಭಾಗವಾಗಿದ್ದಾರೆ ಎಂದು ಆರೋಪ ಮಾಡಿದ್ದರು.

ಈ ಆರೋಪಗಳು ತಮ್ಮ ಗೌರವಕ್ಕೆ ಧಕ್ಕೆ ತಂದಿವೆ ಎಂದು ಆರೋಪಿಸಿ ಸಸಿಕಾಂತ್ ಸೆಂಥಿಲ್ ಅವರು ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಸಮನ್ಸ್ ಜಾರಿ ಮಾಡಿದೆ.

ಆಗಸ್ಟ್‌ 24ರಂದು ಜನಾರ್ದನ ರೆಡ್ಡಿ ನ್ಯಾಯಾಲಯಕ್ಕೆ ಹಾಜರಾಗಿ ವಿಚಾರಣೆ ಎದುರಿಸಬೇಕಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img