HomeGadag Newsಶವವಾಹನ ಬಾಡಿಗೆ ಇಳಿಕೆಗೆ ಸಾರ್ವಜನಿಕರ ಆಗ್ರಹ

ಶವವಾಹನ ಬಾಡಿಗೆ ಇಳಿಕೆಗೆ ಸಾರ್ವಜನಿಕರ ಆಗ್ರಹ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಪುರಸಭೆ ಹೊಸದಾಗಿ ಖರೀದಿಸಿರುವ ಶವವಾಹನ (ಮುಕ್ತಿವಾಹಿನಿ) ಸೇವೆಗೆ ನಿಗದಿಪಡಿಸಿರುವ ₹2,000 ಬಾಡಿಗೆ ಶುಲ್ಕವನ್ನು ಕಡಿಮೆ ಮಾಡಿ ₹500ಕ್ಕೆ ನಿಗದಿಪಡಿಸಬೇಕು ಎಂದು ಸಾರ್ವಜನಿಕರು ಮಂಗಳವಾರ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ನಾಗರಾಜ ಚಿಂಚಲಿ, ಈ ಹಿಂದೆ ಬಳಕೆಯಲ್ಲಿದ್ದ ಶವವಾಹನ ಸಂಪೂರ್ಣ ಶಿಥಿಲಗೊಂಡಿದ್ದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿತ್ತು. ಹೊಸ ವಾಹನ ಖರೀದಿಸಿರುವುದು ಸ್ವಾಗತಾರ್ಹ ಕ್ರಮವಾದರೂ, ಏಕಾಏಕಿ ₹2,000 ಸೇವಾ ಶುಲ್ಕ ನಿಗದಿಪಡಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಭಾರವಾಗಲಿದೆ ಎಂದು ಹೇಳಿದರು.

ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಶವವಾಹನದ ಬಾಡಿಗೆ ದರವನ್ನು ₹500ಕ್ಕೆ ನಿಗದಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಪುರಸಭೆ ವ್ಯವಸ್ಥಾಪಕಿ ಮಂಜುಳಾ ಹೂಗಾರ, ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಯಲ್ಲಪ್ಪ ಜಾಲಗಾರ, ಬಸವರಾಜ ದೊಡ್ಡಮನಿ, ಶಿವಣ್ಣ ಕಟಗಿ, ಸದಾನಂದ ನಂದೆಣ್ಣವರ, ಪ್ರಕಾಶ ಕೊಂಚಿಗೇರಿಮಠ, ಟಾಕಪ್ಪ ಸಾತಪೂತೆ, ಎಂ.ಆರ್. ಪಾಟೀಲ, ಅಪ್ಪಣ್ಣ ಮುಳಗುಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img