HomeIndia Newsಪ್ರತಿಪಕ್ಷಗಳ ಗದ್ದಲದ ನಡುವೆ ಲೋಕಸಭೆಯಲ್ಲಿ 'ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ವಿಧೇಯಕ' ಅಂಗೀಕಾರ

ಪ್ರತಿಪಕ್ಷಗಳ ಗದ್ದಲದ ನಡುವೆ ಲೋಕಸಭೆಯಲ್ಲಿ ‘ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ವಿಧೇಯಕ’ ಅಂಗೀಕಾರ

For Dai;y Updates Join Our whatsapp Group

ನವದೆಹಲಿ: ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ, ಕಲಾಪದ ಗದ್ದಲ ಹಾಗೂ ಭಾರಿ ಹಂಗಾಮದ ನಡುವೆಯೇ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ–2026’ ಅನ್ನು ಲೋಕಸಭೆ ಬುಧವಾರ ಧ್ವನಿಮತದ ಮೂಲಕ ಅಂಗೀಕರಿಸಿದೆ.

ಜುಲೈ 20ರಂದು ನವದೆಹಲಿಯ ಜಂತರ್ ಮಂತರ್‌ನಿಂದ ಹಮ್ಮಿಕೊಳ್ಳಲಾಗಿದ್ದ ‘ಸಂಸದ್ ಚಲೋ’ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶ ನೀಡಿದ್ದರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ ವಿಪಕ್ಷಗಳು ಸದನದಲ್ಲಿ ತೀವ್ರ ಪ್ರತಿಭಟನೆ ನಡೆಸಿದರೂ, ಸರ್ಕಾರ ಮಸೂದೆಯನ್ನು ಧ್ವನಿಮತದ ಮೂಲಕ ಅಂಗೀಕರಿಸಿತು.

ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮ ಪ್ರಕರಣಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ತಿದ್ದುಪಡಿ ಮಸೂದೆಯನ್ನು ಮಂಡಿಸಿತ್ತು. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸುವುದು ಹಾಗೂ ಪರೀಕ್ಷಾ ಮಾಫಿಯಾಗೆ ಕಡಿವಾಣ ಹಾಕುವುದು ಇದರ ಪ್ರಮುಖ ಉದ್ದೇಶವಾಗಿದೆ.

ಮಸೂದೆಯಲ್ಲಿ ಪರೀಕ್ಷಾ ಅಕ್ರಮಗಳ ವಿರುದ್ಧ ಕಠಿಣ ಶಿಕ್ಷೆಯ ನಿಯಮಗಳನ್ನು ಸೇರಿಸಲಾಗಿದೆ. ಪರೀಕ್ಷಾ ಅಕ್ರಮ ಅಥವಾ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗುವವರಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ತಪ್ಪಿತಸ್ಥರ ಮೇಲೆ ₹50 ಲಕ್ಷದವರೆಗೆ ದಂಡ ವಿಧಿಸುವ ಅವಕಾಶವೂ ಮಸೂದೆಯಲ್ಲಿದೆ.

ಕೇಂದ್ರ ಸರ್ಕಾರದ ಪ್ರಕಾರ, ಈ ತಿದ್ದುಪಡಿ ಕಾನೂನಿನಿಂದ ಸಾರ್ವಜನಿಕ ಪರೀಕ್ಷೆಗಳ ವಿಶ್ವಾಸಾರ್ಹತೆ ಹೆಚ್ಚಲಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಂಘಟಿತ ಪರೀಕ್ಷಾ ಅಕ್ರಮಗಳಿಗೆ ಪರಿಣಾಮಕಾರಿ ತಡೆ ಬೀಳಲಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img