HomeKarnataka NewsBREAKING: ಯೋಗೇಶ್ ಗೌಡ ಕೊಲೆ ಕೇಸಲ್ಲಿ ವಿನಯ್ ಕುಲಕರ್ಣಿಗೆ ಜಾಮೀನು! ಜೀವಾವದಿ ಶಿಕ್ಷೆಗೆ ಹೈಕೋರ್ಟ್ ತಡೆ 

BREAKING: ಯೋಗೇಶ್ ಗೌಡ ಕೊಲೆ ಕೇಸಲ್ಲಿ ವಿನಯ್ ಕುಲಕರ್ಣಿಗೆ ಜಾಮೀನು! ಜೀವಾವದಿ ಶಿಕ್ಷೆಗೆ ಹೈಕೋರ್ಟ್ ತಡೆ 

For Dai;y Updates Join Our whatsapp Group

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ. ನ್ಯಾಯಾಲಯವು ಅವರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಅಮಾನತುಗೊಳಿಸಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಹೈಕೋರ್ಟ್ ₹5 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್ ಹಾಗೂ ಶ್ಯೂರಿಟಿ ಸಲ್ಲಿಸುವಂತೆ ಸೂಚಿಸಿದ್ದು, ನ್ಯಾಯಾಲಯದ ಅನುಮತಿ ಇಲ್ಲದೆ ದೇಶ ತೊರೆಯಬಾರದು ಎಂಬ ಷರತ್ತನ್ನೂ ವಿಧಿಸಿದೆ. ಇದೇ ವೇಳೆ, ವಿನಯ್ ಕುಲಕರ್ಣಿ ದೋಷಿ ಎಂದು ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪಿನ ಜಾರಿಗೆ ತಡೆಯಾಜ್ಞೆಯನ್ನೂ ನೀಡಿದೆ.

ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್ ಮತ್ತು ಜಿ. ಬಸವರಾಜ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 10 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದ್ದು, ಆರೋಪಿಗಳಲ್ಲೊಬ್ಬರಾದ ಚನ್ನಕೇಶವ ಟಿಂಗರಿಕರ್ ಅವರಿಗೂ ಜಾಮೀನು ಮಂಜೂರಾಗಿದೆ.

ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿದರೆ, ಸಿಬಿಐ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಹಾಜರಾಗಿ ಜಾಮೀನು ಅರ್ಜಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ವಿನಯ್ ಕುಲಕರ್ಣಿ ವಿರುದ್ಧ ಈ ಹಿಂದೆ ಹಲವು ಪ್ರಕರಣಗಳು ದಾಖಲಾಗಿವೆ. ಕೆಲವು ಪ್ರಕರಣಗಳಲ್ಲಿ ಅವರು ಖುಲಾಸೆಯಾಗಿದ್ದರೂ, ಉಳಿದ ಪ್ರಕರಣಗಳ ಗಂಭೀರತೆಯನ್ನು ಪರಿಗಣಿಸಬೇಕು ಎಂದು ಸಿಬಿಐ ವಾದಿಸಿತು. ಅಲ್ಲದೆ, ಸಾಕ್ಷ್ಯ ನಾಶಪಡಿಸುವುದು ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಆರೋಪಗಳಿದ್ದು, ಅವರು ಪ್ರಭಾವಿ ರಾಜಕಾರಣಿಯಾಗಿರುವ ಕಾರಣ ಜಾಮೀನು ನೀಡಬಾರದು ಎಂದು ನ್ಯಾಯಾಲಯದ ಗಮನಕ್ಕೆ ತರಲಾಯಿತು.

ಆದರೆ, ಎರಡೂ ಪಕ್ಷಗಳ ವಾದ ಆಲಿಸಿದ ಹೈಕೋರ್ಟ್ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ಮಂಜೂರು ಮಾಡಿದೆ. ಈ ಆದೇಶದಿಂದ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಮುಂದುವರಿಯುವ ಸಾಧ್ಯತೆ ಹೆಚ್ಚಿದ್ದು, ಅವರ ರಾಜಕೀಯ ಭವಿಷ್ಯಕ್ಕೂ ತಾತ್ಕಾಲಿಕ ನೆಮ್ಮದಿ ದೊರೆತಂತಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img