ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ನಗರದ ಭಾರತೀಯ ಜನತಾ ಪಕ್ಷದ ವತಿಯಿಂದ ಶಾಸಕ ಡಾ. ಚಂದ್ರು ಲಮಾಣಿ ಅವರ ಜನ್ಮದಿನದ ಅಂಗವಾಗಿ ತಾಲೂಕು ಆಸ್ಪತ್ರೆಯಲ್ಲಿ ಶನಿವಾರ ರೋಗಿಗಳಿಗೆ ಹಾಲು, ಹಣ್ಣು ಹಾಗೂ ಬ್ರೆಡ್ ವಿತರಿಸಿ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕ್ಕೀರೇಶ ರಟ್ಟಿಹಳ್ಳಿ, ಸಂದೀಪ ಕಪ್ಪತ್ತನವರ, ಜಾನು ಲಮಾಣಿ, ಬಸವರಾಜ ವಡವಿ, ನಂದಾ ಪಲ್ಲೇದ, ಗೂಳಪ್ಪ ಕರಿಗಾರ, ಅಕ್ಬರಸಾಬ ಯಾದಗಿರಿ, ರಾಮಣ್ಣ ಕಂಬಳಿ, ವಿಠ್ಠಲ ಭಿಡವೆ, ಶ್ರೀನಿವಾಸ ಬಾರಬಾರ, ಪರಶುರಾಮ ಡೊಂಕಬಳ್ಳಿ, ಮಲ್ಲಿಕಾರ್ಜುನ ಕಬಾಡಿ, ವಿನೋದ ಕಪ್ಪತ್ತನವರ, ವೀರನಗೌಡ ಪಾಟೀಲ, ಸಂಜು ಸೋಗಿನ, ಶಶಿ ಪೂಜಾರ, ಜಗದೀಶ ತೇಲಿ, ಸಂತೋಷ ತೋಡೆಕಾರ, ಲಕ್ಷ್ಮಣ ಲಮಾಣಿ, ಬಸವರಾಜ ಕಲ್ಯಾಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



