HomeKarnataka Newsಶೃಂಗೇರಿಯಲ್ಲಿ ಭಾರೀ ಮಳೆ ಅವಾಂತರ! ರಸ್ತೆಗೆ ಬಿದ್ದ ಬೃಹತ್ ಮರ, ಸಿರಿಮನೆ ಫಾಲ್ಸ್ ರಸ್ತೆ ಬಂದ್

ಶೃಂಗೇರಿಯಲ್ಲಿ ಭಾರೀ ಮಳೆ ಅವಾಂತರ! ರಸ್ತೆಗೆ ಬಿದ್ದ ಬೃಹತ್ ಮರ, ಸಿರಿಮನೆ ಫಾಲ್ಸ್ ರಸ್ತೆ ಬಂದ್

For Dai;y Updates Join Our whatsapp Group

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಹಲವೆಡೆ ಮಳೆ ಅವಾಂತರ ಸೃಷ್ಟಿಸಿದೆ.

ಭಾರೀ ಗಾಳಿ-ಮಳೆಯಿಂದಾಗಿ ಹುಲುಗಾರುಬೈಲ್ ಬಳಿ ರಸ್ತೆಗೆ ಬೃಹತ್ ಮರವೊಂದು ಉರುಳಿ ಬಿದ್ದಿದ್ದು, ಸಿರಿಮನೆ ಫಾಲ್ಸ್‌ಗೆ ತೆರಳುವ ರಸ್ತೆ ಸಂಪರ್ಕ ಕಡಿತಗೊಂಡಿದೆ.

ರಸ್ತೆ ಮಧ್ಯದಲ್ಲಿ ಮರ ಬಿದ್ದ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಭಾನುವಾರ ರಜೆ ದಿನವಾಗಿದ್ದರಿಂದ ಸಿರಿಮನೆ ಜಲಪಾತ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ಆದರೆ ರಸ್ತೆ ಬಂದ್ ಆಗಿದ್ದರಿಂದ ಪ್ರವಾಸಿಗರು ಸ್ಥಳದಲ್ಲೇ ಪರದಾಡುವಂತಾಯಿತು.

ಸ್ಥಳೀಯರು ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದು, ಸಂಚಾರವನ್ನು ಸುಗಮಗೊಳಿಸುವ ಪ್ರಯತ್ನ ನಡೆಯುತ್ತಿದೆ. ಭಾರೀ ಮಳೆಯ ಪರಿಣಾಮ ಗ್ರಾಮದ ಸುತ್ತಮುತ್ತ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.

ಇನ್ನೊಂದೆಡೆ, ಶೃಂಗೇರಿ ಭಾಗದಲ್ಲಿ ನಿರಂತರ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿಯ ನೀರಿನ ಮಟ್ಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಮಳೆ ಕೊರತೆಯಿಂದ ಕಂಗಾಲಾಗಿದ್ದ ಮಲೆನಾಡಿನ ಚಿತ್ರಣ ಇದೀಗ ಸಂಪೂರ್ಣ ಬದಲಾಗಿದೆ. ಕೇವಲ ಎರಡು ದಿನಗಳ ನಿರಂತರ ಮಳೆಯಿಂದಾಗಿ ನದಿಗಳು, ಜಲಪಾತಗಳು ಮೈದುಂಬಿ ಹರಿಯುತ್ತಿದ್ದು, ಪ್ರಕೃತಿ ತನ್ನ ವೈಭವ ತೋರಿಸುತ್ತಿದೆ.

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img