HomeKarnataka Newsಕೊಪ್ಪಳದಲ್ಲಿ ನಿಗೂಢವಾಗಿ ಸಾಯುತ್ತಿವೆ ನೂರಾರು ಬೆಳ್ಳಕ್ಕಿಗಳು! ಹಕ್ಕಿ ಜ್ವರದ ಆತಂಕ

ಕೊಪ್ಪಳದಲ್ಲಿ ನಿಗೂಢವಾಗಿ ಸಾಯುತ್ತಿವೆ ನೂರಾರು ಬೆಳ್ಳಕ್ಕಿಗಳು! ಹಕ್ಕಿ ಜ್ವರದ ಆತಂಕ

For Dai;y Updates Join Our whatsapp Group

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಬರಗಾಲದ ನಡುವೆಯೇ ಇದೀಗ ಹಕ್ಕಿಗಳ ಸರಣಿ ಸಾವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ನಗರದ ಹೃದಯಭಾಗದಲ್ಲಿರುವ ನಗರಸಭೆ ಕಚೇರಿ ಹಿಂಭಾಗದ ಮರಗಳಲ್ಲಿ ಕಳೆದ ಕೆಲವು ದಿನಗಳಿಂದ ಬೆಳ್ಳಕ್ಕಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಸ್ಥಳೀಯರಲ್ಲಿ ಹಕ್ಕಿ ಜ್ವರದ ಭೀತಿ ಹೆಚ್ಚಾಗಿದೆ.

ಕಳೆದ ಮೂರು ತಿಂಗಳಿಂದ ನಗರಸಭೆ ಹಿಂಭಾಗದ ಮರಗಳಲ್ಲಿ ಸಾವಿರಾರು ಬೆಳ್ಳಕ್ಕಿಗಳು ಗೂಡು ಕಟ್ಟಿಕೊಂಡು ವಾಸವಾಗಿದ್ದವು. ಆದರೆ ಕಳೆದ ಒಂದು ವಾರದಿಂದ ಪ್ರತಿದಿನ ಹತ್ತಾರು ಹಕ್ಕಿಗಳು ಸತ್ತು ಬೀಳುತ್ತಿರುವುದು ಕಂಡುಬಂದಿದೆ. ಇನ್ನೂ ನೂರಾರು ಹಕ್ಕಿಗಳು ಅಸ್ವಸ್ಥಗೊಂಡಿದ್ದು, ಹಾರಲು ಸಾಧ್ಯವಾಗದೆ ಮರಗಳ ಕೆಳಗೆ ಬೀಳುತ್ತಿರುವ ದೃಶ್ಯಗಳು ಕಂಡುಬರುತ್ತಿವೆ.

ಹಕ್ಕಿಗಳ ನಿರಂತರ ಸಾವಿನಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಹಕ್ಕಿ ಜ್ವರ ಹರಡಿದೆಯೇ ಎಂಬ ಅನುಮಾನ ವ್ಯಕ್ತವಾಗಿದ್ದು, ಆರೋಗ್ಯ ಹಾಗೂ ಪಶುಸಂಗೋಪನಾ ಇಲಾಖೆಗಳು ತಕ್ಷಣ ಪರಿಶೀಲನೆ ನಡೆಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸ್ಥಳೀಯರ ಆರೋಪದಂತೆ, ಘಟನೆ ನಡೆದಿರುವುದು ನಗರಸಭೆ ಕಚೇರಿ ಹಿಂಭಾಗದಲ್ಲೇ ಆದರೂ ಸಂಬಂಧಪಟ್ಟ ಅಧಿಕಾರಿಗಳು ಇನ್ನೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಮೃತಪಟ್ಟ ಹಕ್ಕಿಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸುವ ಕ್ರಮವೂ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಲಾಗಿದೆ.

ಇದೇ ವೇಳೆ ಮಾಹಿತಿ ನೀಡಿದಾಗ ಕೆಲ ಅಧಿಕಾರಿಗಳು “ಎಸ್‌ಐಆರ್‌ ಕೆಲಸದಲ್ಲಿ ಬ್ಯುಸಿಯಾಗಿದ್ದೇವೆ” ಎಂದು ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದ್ದು, ಇದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋಳಿ ಸಾಕಾಣಿಕೆ ಕೇಂದ್ರಗಳಿರುವ ಹಿನ್ನೆಲೆಯಲ್ಲಿ ಹಕ್ಕಿಗಳ ಸಾವಿನ ನಿಖರ ಕಾರಣವನ್ನು ತಕ್ಷಣ ಪತ್ತೆಹಚ್ಚಬೇಕು. ಅಗತ್ಯವಿದ್ದರೆ ಹಕ್ಕಿಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿ, ಜನರಲ್ಲಿರುವ ಆತಂಕ ನಿವಾರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img