HomeKarnataka Newsಆಡಿಯೋ ಇದ್ದರೆ ದೂರು ಕೊಡಿ, ಸತ್ಯಾಸತ್ಯತೆ ಬಹಿರಂಗಪಡಿಸುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ ಸವಾಲು

ಆಡಿಯೋ ಇದ್ದರೆ ದೂರು ಕೊಡಿ, ಸತ್ಯಾಸತ್ಯತೆ ಬಹಿರಂಗಪಡಿಸುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ ಸವಾಲು

For Dai;y Updates Join Our whatsapp Group

ಬೆಂಗಳೂರು: ಮಾಜಿ ಸಚಿವ ತಿಮ್ಮಾಪುರ್ ಹಾಗೂ ನಂಜಯ್ಯಮಠ ಅವರ ಹೆಸರಿನಲ್ಲಿ ಹರಿದಾಡುತ್ತಿರುವ ಆಡಿಯೋ ವಿವಾದಕ್ಕೆ ಸಂಬಂಧಿಸಿದಂತೆ, ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಧಿಕೃತವಾಗಿ ದೂರು ನೀಡಿದರೆ ಫೊರೆನ್ಸಿಕ್ ಪರೀಕ್ಷೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಿಮ್ಮಾಪುರ್ ಮತ್ತು ನಂಜಯ್ಯಮಠ ಇಬ್ಬರೂ ಆಡಿಯೋ ಕುರಿತು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆಡಿಯೋ ಛಲವಾದಿ ನಾರಾಯಣಸ್ವಾಮಿ ಅವರ ಬಳಿ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಅವರು ಅಧಿಕೃತವಾಗಿ ದೂರು ಸಲ್ಲಿಸಿದರೆ ಪ್ರಕರಣವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು ಎಂದು ಹೇಳಿದರು.

“ನಾನೇ ಗೃಹ ಸಚಿವನಾಗಿದ್ದೇನೆ. ದೂರು ಕೊಡಿ. ಆಡಿಯೋವನ್ನು ಫೊರೆನ್ಸಿಕ್ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ವರದಿ ಪಡೆಯುತ್ತೇವೆ. ಆಡಿಯೋ ನಿಮಗೆ ಹೇಗೆ ಸಿಕ್ಕಿತು ಎಂಬುದನ್ನು ನೀವು ತಿಳಿಸಿ. ಅದು ನಿಜವಾಗಿಯೂ ಅವರ ಧ್ವನಿಯೇ ಅಥವಾ ಅಲ್ಲವೇ ಎಂಬುದನ್ನು ತನಿಖೆಯ ಬಳಿಕ ಸ್ಪಷ್ಟಪಡಿಸುತ್ತೇವೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಯಾವುದೇ ಅಧಿಕೃತ ದೂರು ಇಲ್ಲದೆ ಕೇವಲ ಆಡಿಯೋ ವೈರಲ್ ಆಗಿದೆ ಎಂಬ ಕಾರಣಕ್ಕೆ ಸರ್ಕಾರ ಪ್ರತಿಕ್ರಿಯಿಸುವುದು ಸರಿಯಲ್ಲ. ಛಲವಾದಿ ನಾರಾಯಣಸ್ವಾಮಿ ನನ್ನ ಆತ್ಮೀಯ ಸ್ನೇಹಿತರೂ ಆಗಿದ್ದಾರೆ. ಅವರು ನೀಡುವ ದೂರನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ ಎಂದು ತಿಳಿಸಿದರು.

ದೂರು ದಾಖಲಾದರೆ ತನಿಖೆ ನಡೆಸಿ, ಫೊರೆನ್ಸಿಕ್ ವರದಿಯ ಆಧಾರದ ಮೇಲೆ ಸತ್ಯಾಂಶವನ್ನು ವಿಧಾನಸಭೆಯಲ್ಲಿಯೂ ಮಂಡಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img