HomeUncategorizedಜಿಲ್ಲಾ ಶಿಕ್ಷಕರ ಸಂಘಕ್ಕೆ ಮೂವರು ನಾಮನಿರ್ದೇಶಿತ ಸದಸ್ಯರ ಆಯ್ಕೆ

ಜಿಲ್ಲಾ ಶಿಕ್ಷಕರ ಸಂಘಕ್ಕೆ ಮೂವರು ನಾಮನಿರ್ದೇಶಿತ ಸದಸ್ಯರ ಆಯ್ಕೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗದಗ ಜಿಲ್ಲಾ ಘಟಕಕ್ಕೆ ಲಕ್ಷ್ಮೇಶ್ವರ ತಾಲೂಕಿನಿಂದ ಶಿವಾನಂದ ಅಸುಂಡಿ, ಫಕ್ಕಿರೇಶ ತಳವಾರ ಹಾಗೂ ಅಶೋಕ ಅರಗಂಜಿ ಅವರನ್ನು ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ.

ಗದಗದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಪದಗ್ರಹಣ ಹಾಗೂ ಧನ್ಯತಾ ಸಮರ್ಪಣಾ ಸಮಾರಂಭ–2026ರಲ್ಲಿ ನೂತನ ನಾಮನಿರ್ದೇಶಿತ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎನ್. ಭರಮಗೌಡ್ರ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ನಂದೆಣ್ಣವರ, ಸಹಕಾರ್ಯದರ್ಶಿ ಎಸ್.ವಿ. ಸೋಗಿ, ಸಂಘಟನಾ ಕಾರ್ಯದರ್ಶಿ ಮುತ್ತಣ್ಣ ಹುಬ್ಬಳ್ಳಿ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಸದಸ್ಯ ಎಂ.ಎಸ್. ಹಿರೇಮಠ, ಶಿರಹಟ್ಟಿ ಶಿಕ್ಷಕರ ಸಂಘದ ಅಧ್ಯಕ್ಷ ಶರಣಬಸವಗೌಡ ಪಾಟೀಲ, ಪರಮೇಶ್ವರ ಕಾಳಶೆಟ್ಟಿ, ಯಲ್ಲಪ್ಪ ತಿರಕಣ್ಣವರ, ಎಸ್.ಎಫ್. ಸುಣಗಾರ, ಫಕ್ಕಿರೇಶ ಡಂಬಳ, ಹಂಜಗಿ, ಗಿರೀಶ ನೇಕಾರ ಸೇರಿದಂತೆ ಹಲವರು ನೂತನ ಸದಸ್ಯರಿಗೆ ಶುಭಾಶಯ ಕೋರಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img