HomeKarnataka Newsತಿಥಿ ಊಟ ಸೇವಿಸಿ 15 ಶಾಲಾ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ತಿಥಿ ಊಟ ಸೇವಿಸಿ 15 ಶಾಲಾ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥ: ಆಸ್ಪತ್ರೆಗೆ ದಾಖಲು

For Dai;y Updates Join Our whatsapp Group

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಸಿದ್ಧಪಡಿಸಿದ್ದ ಭೋಜನ ಸೇವಿಸಿದ 15ಕ್ಕೂ ಹೆಚ್ಚು ವಿಶೇಷಚೇತನ ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಅಸ್ವಸ್ಥರಾದವರನ್ನು ಭದ್ರಾವತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಭದ್ರಾವತಿಯ ವೇಲೂರ್ ಶೆಡ್ ಪ್ರದೇಶದ ಮನೆಯೊಂದರಲ್ಲಿ ತಿಥಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕಾಗಿ ಸಿದ್ಧಪಡಿಸಲಾಗಿದ್ದ ಊಟವನ್ನು ನ್ಯೂಟೌನ್‌ನ ತರಂಗ ಕಿವುಡು ಮತ್ತು ಮೂಗರ ವಸತಿ ಶಾಲೆಯ ವಿದ್ಯಾರ್ಥಿಗಳು ಸೇವಿಸಿದ್ದರು.

ಊಟ ಸೇವಿಸಿದ ಕೆಲವೇ ಗಂಟೆಗಳಲ್ಲಿ ವಿದ್ಯಾರ್ಥಿಗಳಿಗೆ ತೀವ್ರ ವಾಂತಿ ಹಾಗೂ ಭೇದಿ ಕಾಣಿಸಿಕೊಂಡಿದೆ. ಇದೇ ಭೋಜನ ಸೇವಿಸಿದ್ದ ಮೃತರ ಕುಟುಂಬದ ಸಂಬಂಧಿಕರು ಹಾಗೂ ಸ್ಥಳೀಯರು ಸೇರಿದಂತೆ 7ರಿಂದ 8 ಮಂದಿ ಸಾರ್ವಜನಿಕರ ಆರೋಗ್ಯದಲ್ಲೂ ಏರುಪೇರಾಗಿದೆ.

ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ತಕ್ಷಣವೇ ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಸದ್ಯ ಎಲ್ಲರ ಆರೋಗ್ಯ ಸ್ಥಿರವಾಗಿದ್ದು, ಯಾರನ್ನೂ ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸುವ ಅಗತ್ಯ ಎದುರಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ವಿಶೇಷಚೇತನರಾಗಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ವೈದ್ಯಕೀಯ ನಿಗಾದಲ್ಲಿ ಇರಿಸಿ ಚಿಕಿತ್ಸೆ ಮುಂದುವರಿಸಲು ನಿರ್ಧರಿಸಲಾಗಿದೆ.

ಒಂದೇ ಕಾರ್ಯಕ್ರಮದ ಊಟ ಸೇವಿಸಿದ ಹಲವರು ಏಕಕಾಲದಲ್ಲಿ ಅಸ್ವಸ್ಥಗೊಂಡಿರುವ ಹಿನ್ನೆಲೆಯಲ್ಲಿ ಆಹಾರ ಕಲುಷಿತಗೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾರ್ಯಕ್ರಮದ ಬಳಿಕ ಉಳಿದಿದ್ದ ಆಹಾರವನ್ನು ಮಕ್ಕಳಿಗೆ ನೀಡಲಾಗಿತ್ತೇ ಅಥವಾ ಆಹಾರ ತಯಾರಿಕೆಯಲ್ಲೇ ದೋಷ ಸಂಭವಿಸಿತ್ತೇ ಎಂಬುದರ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img