ಸಿಡಿಲಿನ ಹೊಡೆತಕ್ಕೆ ಕುರಿಗಾಹಿ ಬಲಿ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ವಿಜಯಸಾಕ್ಷಿ ಸುದ್ದಿ, ಕುಂದಗೋಳ:
ಸಿಡಿಲು ಬಡಿದು ಕುರಿಗಾಹಿಯೊಬ್ಬ ಮೃತಪಟ್ಟ
ಘಟನೆ ತಾಲೂಕಿನ ಹಿರೇಹರಕುಣಿ ಗ್ರಾಮದ ಹೊರವಲಯದಲ್ಲಿ ನಿನ್ನೆ ಸಂಜೆ ನಡೆದಿದೆ.
ಮೃತ ಕುರಿಗಾಹಿ ದೇವೆಂದ್ರ ಮುದುಕಪ್ಪ ಮಚಿನಹಳ್ಳಿ ವಯಸ್ಸು (19) ಎಂದು ತಿಳಿದು ಬಂದಿದ್ದು. ಎಂದಿನಂತೆ ಕುರಿ ಕಾಯಲು ಹೋದಾಗ ಸಿಡಿಲು ಬಡಿದ ಪರಿಣಾಮ ಕುರಿಗಾಹಿ ಸಾವನ್ನಪ್ಪಿದ್ದಾನೆ.
ಕುರಿಗಾಹಿ ಸಾವನ್ನಪ್ಪಿದ್ದನ್ನು ತಿಳಿದ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳಗಿದ್ದು ಆಕ್ರಂದನ ಕರುಳು ಕಿತ್ತು ಬರುವಂತಿದೆ.
ಗುಡಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ತಹಶೀಲ್ದಾರ ಹಾಗೂ ಗುಡಗೇರಿ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಭೇಟಿ ಮಾಡಿದ್ದಾರೆ.
ವರದಿ. ಡಾ. ಅಬ್ದುಲ್ ರಜಾಕ್
ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ Facebook । Twitter । YouTube ಅನುಸರಿಸಿ