HomeGadag Newsಗುಡ್ಡಗಾಡಿನಲ್ಲಿ ಗರ್ಜಿಸಿದ ಸೈಕ್ಲಿಸ್ಟ್‌ಗಳು

ಗುಡ್ಡಗಾಡಿನಲ್ಲಿ ಗರ್ಜಿಸಿದ ಸೈಕ್ಲಿಸ್ಟ್‌ಗಳು

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಪಟ್ಟಣದ ಯಲಿಶಿರುಂಜ ಗುಡ್ಡಗಾಡು ಪ್ರದೇಶದಲ್ಲಿ ನಡೆದ ೨೧ನೇ ರಾಜ್ಯ ಮಟ್ಟದ ಸೈಕ್ಲಿಂಗ್‌ ಸ್ಪರ್ಧೆ ಅತ್ಯಂತ ರೋಚಕವಾಗಿ ನಡೆಯಿತು. ಕರ್ನಾಟಕ ರಾಜ್ಯ ಹಾಗೂ ಗದಗ ಜಿಲ್ಲಾ ಅಮೇಚೂರ್ ಸೈಕ್ಲಿಂಗ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಸ್ಪರ್ಧೆಯಲ್ಲಿ ರಾಜ್ಯದ ೧೬ ಜಿಲ್ಲೆಗಳಿಂದ ೧೮೦ ಸೈಕ್ಲಿಸ್ಟ್‌ಗಳು ಪಾಲ್ಗೊಂಡು ತಮ್ಮ ಕ್ರೀಡಾ ಸಾಮರ್ಥ್ಯ ಪ್ರದರ್ಶಿಸಿದರು.

ಸ್ಪರ್ಧೆ ಆರಂಭವಾಗುತ್ತಿದ್ದಂತೆ ಸೈಕ್ಲಿಸ್ಟ್‌ಗಳು ಬಿರುಗಾಳಿಯ ವೇಗದಲ್ಲಿ ಟ್ರ್ಯಾಕ್‌ನಲ್ಲಿ ಮುನ್ನುಗ್ಗಿದರು. ಗುಡ್ಡಗಾಡಿನ ಕಠಿಣ ಹಾದಿ, ತಿರುವುಗಳು ಹಾಗೂ ಏರಿಳಿತಗಳ ನಡುವೆ ಗೆಲುವಿಗಾಗಿ ಕ್ರೀಡಾಪಟುಗಳು ನಡೆಸಿದ ಪೈಪೋಟಿ ಪ್ರತಿ ಕ್ಷಣವೂ ಕುತೂಹಲ ಮೂಡಿಸಿತು.

ಯಾರು ಮುನ್ನಡೆ ಸಾಧಿಸಲಿದ್ದಾರೆ, ಕೊನೆಯ ಕ್ಷಣದಲ್ಲಿ ಗೆಲುವಿನ ಗುರಿ ಮುಟ್ಟುವವರು ಯಾರು ಎಂಬ ಕುತೂಹಲದ ನಡುವೆ ಸೈಕ್ಲಿಸ್ಟ್‌ಗಳು ಪ್ರದರ್ಶಿಸಿದ ಕೌಶಲ್ಯ ನೆರೆದಿದ್ದ ಸಹಸ್ರಾರು ಕ್ರೀಡಾಭಿಮಾನಿಗಳನ್ನು ರೋಮಾಂಚನಗೊಳಿಸಿತು.

ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಗದಗ ಜಿಲ್ಲೆಯ ವಿವಿಧ ತಾಲೂಕುಗಳು ಹಾಗೂ ಮುಳಗುಂದ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಆಗಮಿಸಿದ್ದರು.

ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳು ಹಾಗೂ ಯುವಕರು ಸೈಕ್ಲಿಂಗ್ ಸ್ಪರ್ಧೆಯನ್ನು ಕಣ್ತುಂಬಿಕೊಂಡು, ತಾವೂ ಮುಂದಿನ ದಿನಗಳಲ್ಲಿ ಈ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂಬ ಉತ್ಸಾಹ ಪಡೆದುಕೊಂಡರು. ಗುಡ್ಡಗಾಡಿನ ಪ್ರದೇಶದಲ್ಲಿ ನಡೆದ ಸ್ಪರ್ಧೆ ಕ್ರೀಡಾಪಟುಗಳ ಸಾಮರ್ಥ್ಯಕ್ಕೆ ಸವಾಲಾಗುವುದರ ಜೊತೆಗೆ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿತು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img