HomeKarnataka Newsಚಾಮರಾಜನಗರದಲ್ಲಿ ಕಾಡಾನೆ ದಾಳಿ; ಕರ್ತವ್ಯದಲ್ಲಿದ್ದ ಫಾರೆಸ್ಟ್ ವಾಚರ್ ಬಲಿ!

ಚಾಮರಾಜನಗರದಲ್ಲಿ ಕಾಡಾನೆ ದಾಳಿ; ಕರ್ತವ್ಯದಲ್ಲಿದ್ದ ಫಾರೆಸ್ಟ್ ವಾಚರ್ ಬಲಿ!

For Dai;y Updates Join Our whatsapp Group

ಚಾಮರಾಜನಗರ: ಕಾಡಾನೆ ದಾಳಿಗೆ ಫಾರೆಸ್ಟ್ ವಾಚರ್ ಒಬ್ಬರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಪೊನ್ನಾಚಿ ಅರಣ್ಯ ವಲಯದ ಹುಣಸೇಬಯಲು ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಮಲೆಮಹದೇಶ್ವರ ಬೆಟ್ಟದ ಹುಲಿಗೂಡು ಗ್ರಾಮದ ಮಹದೇವಸ್ವಾಮಿ (48) ಮೃತಪಟ್ಟವರು. ಅವರು ಮಲೆಮಹದೇಶ್ವರ ಬೆಟ್ಟ ಅರಣ್ಯ ವ್ಯಾಪ್ತಿಯಲ್ಲಿ ಫಾರೆಸ್ಟ್ ವಾಚರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ರಾತ್ರಿ ವೇಳೆ ಹುಣಸೇಬಯಲು ಅರಣ್ಯ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮಹದೇವಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ, ಪೊಲೀಸರ ಭೇಟಿ:

ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಮಲೆಮಹದೇಶ್ವರ ಬೆಟ್ಟ ಠಾಣೆ ಪೊಲೀಸರು ಕೂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಮಲೆಮಹದೇಶ್ವರ ಬೆಟ್ಟ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ. ಕಾಡಾನೆ ದಾಳಿ ನಡೆದಿರುವ ಸ್ಥಳ ಹಾಗೂ ಘಟನೆಯ ಸಂದರ್ಭದ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img