HomeKarnataka Newsಬೈಕ್ ಟ್ಯಾಕ್ಸಿಗಳಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಗೆ ಅಫಿಡವಿಟ್

ಬೈಕ್ ಟ್ಯಾಕ್ಸಿಗಳಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಗೆ ಅಫಿಡವಿಟ್

For Dai;y Updates Join Our whatsapp Group

ಬೆಂಗಳೂರು: ನಗರದಲ್ಲಿ ಸದ್ದಿಲ್ಲದೆ ಕಾರ್ಯಾಚರಣೆ ನಡೆಸುತ್ತಿರುವ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಕರ್ನಾಟಕ ಸರ್ಕಾರ ಹಾಗೂ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ರಾಜ್ಯ ಸರ್ಕಾರ, ದ್ವಿಚಕ್ರ ವಾಹನಗಳನ್ನು ವಾಣಿಜ್ಯ ಉದ್ದೇಶದ ಟ್ಯಾಕ್ಸಿಗಳಾಗಿ ಬಳಸಲು ಅನುಮತಿ ನೀಡಲು ಸಾಧ್ಯವಿಲ್ಲ ಎಂಬ ತನ್ನ ನಿಲುವನ್ನು ನ್ಯಾಯಾಲಯದ ಮುಂದೆ ಸ್ಪಷ್ಟಪಡಿಸಿದೆ.

ಬೈಕ್ ಟ್ಯಾಕ್ಸಿಗೆ ಸರ್ಕಾರದ ವಿರೋಧಕ್ಕೆ ಕಾರಣಗಳೇನು?

ಬೈಕ್ ಟ್ಯಾಕ್ಸಿ ಸೇವೆಯಿಂದ ಪ್ರಯಾಣಿಕರ ಸುರಕ್ಷತೆಗೆ ಅಪಾಯವಿದೆ ಎಂಬುದನ್ನು ರಾಜ್ಯ ಸರ್ಕಾರ ಪ್ರಮುಖ ಕಾರಣವಾಗಿ ಮುಂದಿಟ್ಟಿದೆ. ಸುರಕ್ಷತೆ ಮತ್ತು ವಿಮೆ ಕೊರತೆ: ಬೈಕ್ ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರಿಗೆ ಸೂಕ್ತ ಸುರಕ್ಷತಾ ವ್ಯವಸ್ಥೆ ಇರುವುದಿಲ್ಲ. ಇಂತಹ ವಾಹನಗಳಿಗೆ ಅಧಿಕೃತ ವಾಣಿಜ್ಯ ವಿಮಾ ರಕ್ಷಣೆ ಇಲ್ಲದಿರುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಪ್ರಯಾಣಿಕರ ಹಿತಾಸಕ್ತಿ ಕಾಪಾಡುವುದು ಕಷ್ಟವಾಗಲಿದೆ ಎಂದು ಸರ್ಕಾರ ಹೇಳಿದೆ.

ಅಪಘಾತದ ಅಪಾಯ: ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದಂತೆ ಅಪಘಾತಗಳು ಹಾಗೂ ಅವುಗಳಿಂದ ಉಂಟಾಗುವ ಸಾವು-ನೋವುಗಳ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರ ವಾದಿಸಿದೆ.

ಕೇಂದ್ರ ಕಾಯ್ದೆಯಲ್ಲಿ ಸ್ಪಷ್ಟ ಉಲ್ಲೇಖವಿಲ್ಲ: ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ‘ಬೈಕ್ ಟ್ಯಾಕ್ಸಿ’ ಎಂಬುದಕ್ಕೆ ಯಾವುದೇ ಸ್ಪಷ್ಟ ವ್ಯಾಖ್ಯಾನ ಅಥವಾ ಪ್ರತ್ಯೇಕ ನಿಯಮಾವಳಿಗಳಿಲ್ಲ. ಹೀಗಾಗಿ ದ್ವಿಚಕ್ರ ವಾಹನಗಳನ್ನು ವಾಣಿಜ್ಯ ಟ್ಯಾಕ್ಸಿ ಸೇವೆಗೆ ಬಳಸಲು ಅನುಮತಿ ನೀಡುವ ಕಾನೂನು ಆಧಾರವಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಎರಡನೇ ದಿನವೂ ಮುಂದುವರಿದ ಸಾರಿಗೆ ಇಲಾಖೆ ಕಾರ್ಯಾಚರಣೆ

ಒಂದೆಡೆ ಬೈಕ್ ಟ್ಯಾಕ್ಸಿ ವಿಚಾರವಾಗಿ ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಯುತ್ತಿದ್ದರೆ, ಮತ್ತೊಂದೆಡೆ ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಸಾರಿಗೆ ಇಲಾಖೆಯ ಜಾರಿ ವಿಭಾಗದ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಂಡಿದೆ.

ಪ್ರಾದೇಶಿಕ ಸಾರಿಗೆ ಕಚೇರಿ (RTO) ಅಧಿಕಾರಿಗಳು ಓಲಾ, ಊಬರ್ ಹಾಗೂ ರಾಪಿಡೋ ಸೇರಿದಂತೆ ವಿವಿಧ ಆ್ಯಪ್ ಆಧಾರಿತ ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ದಾಳಿ ನಡೆಸುತ್ತಿದ್ದಾರೆ.

ಬೆಂಗಳೂರಿನ ಕೋರಮಂಗಲ ಆರ್‌ಟಿಒ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ತೀವ್ರಗೊಂಡಿದ್ದು, ಒಂದೇ ದಿನ 85ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಅನಧಿಕೃತ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಕಡಿವಾಣ ಹಾಕಲು ಸಾರಿಗೆ ಇಲಾಖೆ ಒಟ್ಟು 11 ವಿಶೇಷ ತಂಡಗಳನ್ನು ರಚಿಸಿದೆ. ಈ ತಂಡಗಳು ನಗರದ ವಿವಿಧ ಪ್ರದೇಶಗಳಲ್ಲಿ ತಪಾಸಣೆ ನಡೆಸುತ್ತಿವೆ.

ಈ ಹಿಂದೆ ಕಾರ್ಯಾಚರಣೆಯ ಮೊದಲ ದಿನವೇ 256 ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಲಾಗಿತ್ತು ಎನ್ನಲಾಗಿದೆ. ಇದೀಗ ಎರಡನೇ ದಿನವೂ 85ಕ್ಕೂ ಹೆಚ್ಚು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕೇವಲ ಎರಡು ದಿನಗಳಲ್ಲಿ ನೂರಾರು ಬೈಕ್ ಟ್ಯಾಕ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಬೈಕ್ ಟ್ಯಾಕ್ಸಿ ಸೇವೆಯ ಕಾನೂನು ಮಾನ್ಯತೆ ಕುರಿತು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ ಸಾರಿಗೆ ಇಲಾಖೆಯ ಈ ಕಾರ್ಯಾಚರಣೆ ಮಹತ್ವ ಪಡೆದುಕೊಂಡಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img