HomePolitics Newsಡಿಸಿಎಂ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದ್ದು ನಿಜ; ಸದ್ಯಕ್ಕೆ ಆಗಿಲ್ಲ, ಮುಂದಿನ ದಿನಗಳಲ್ಲಿ ಪಕ್ಷ...

ಡಿಸಿಎಂ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದ್ದು ನಿಜ; ಸದ್ಯಕ್ಕೆ ಆಗಿಲ್ಲ, ಮುಂದಿನ ದಿನಗಳಲ್ಲಿ ಪಕ್ಷ ನಿರ್ಧರಿಸಬಹುದು: ಸತೀಶ್ ಜಾರಕಿಹೊಳಿ

For Dai;y Updates Join Our whatsapp Group

ಬೆಳಗಾವಿ: ಡಿಸಿಎಂ ಸ್ಥಾನ ನೀಡುವ ಕುರಿತು ಪಕ್ಷದ ಮಟ್ಟದಲ್ಲಿ ಚರ್ಚೆ ನಡೆದಿದ್ದು ನಿಜ. ಆದರೆ ಸದ್ಯಕ್ಕೆ ಆ ಸ್ಥಾನ ನೀಡಲಾಗಿಲ್ಲ. ಮುಂದಿನ ದಿನಗಳಲ್ಲಿ ಪಕ್ಷ ಈ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ ಹುದ್ದೆಗಾಗಿ ತಾವು ಯಾವುದೇ ಬೇಡಿಕೆ ಇಟ್ಟಿರಲಿಲ್ಲ. ಪಕ್ಷದ ಹಿತದೃಷ್ಟಿಯಿಂದ ಈ ಕುರಿತು ಚರ್ಚೆ ನಡೆದಿತ್ತು. ಆದರೆ ಈ ವಿಚಾರದಲ್ಲಿ ಯಾವುದೇ ರೀತಿಯ ಒತ್ತಡ ಹೇರುವುದಿಲ್ಲ. ಪಕ್ಷವೇ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.

ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕಾದ ವಿಚಾರಗಳನ್ನು ಹೊರಗಡೆ ಚರ್ಚೆ ಮಾಡುವುದು ಸರಿಯಲ್ಲ. ಹೀಗಾಗಿ ಡಿಸಿಎಂ ಹುದ್ದೆ ಸೇರಿದಂತೆ ಪ್ರಮುಖ ವಿಚಾರಗಳನ್ನು ಪಕ್ಷದ ವೇದಿಕೆಯಲ್ಲೇ ಚರ್ಚಿಸಲಾಗುವುದು ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.

ತಮ್ಮ ಖಾತೆ ಬದಲಾವಣೆ ಮಾಡಲಾಗುತ್ತದೆ ಎಂಬ ಚರ್ಚೆ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಈ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

ಖಾತೆ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಯಾರಿಗೆ ಯಾವ ಖಾತೆ ನೀಡಬೇಕು ಎಂಬುದು ಪಕ್ಷದ ತೀರ್ಮಾನಕ್ಕೆ ಬಿಟ್ಟ ವಿಚಾರ. ಈ ಬಗ್ಗೆ ಪಕ್ಷವೇ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳಾ ಸಚಿವರು ಇಲ್ಲದಿರುವ ವಿಚಾರದ ಬಗ್ಗೆಯೂ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದರು. ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಲು ಒಂದು ಸ್ಥಾನವನ್ನು ಖಾಲಿ ಇಡಲಾಗಿದೆ. ಈ ಸ್ಥಾನವನ್ನು ಭರ್ತಿ ಮಾಡುವ ಬಗ್ಗೆ ಪಕ್ಷದೊಳಗೆ ಚರ್ಚೆ ನಡೆದಿದೆ. ಹಿರಿಯ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹಲವು ಬಾರಿ ಹೇಳಿದ್ದೇವೆ ಎಂದು ತಿಳಿಸಿದರು.

ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹಿರಿಯರಾಗಿದ್ದು, ಅವರಿಗೆ ಸಚಿವ ಸ್ಥಾನ ನೀಡುವುದು ಸೂಕ್ತ ಎಂಬುದು ತಮ್ಮ ಅಭಿಪ್ರಾಯ ಎಂದು ಹೇಳುವ ಮೂಲಕ ಅವರ ಪರವಾಗಿ ಸತೀಶ್ ಜಾರಕಿಹೊಳಿ ಬ್ಯಾಟಿಂಗ್ ಬೀಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img